ಹಬ್ಬದ ಹಿನ್ನೆಲೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ KSRTC

ಹಬ್ಬದ ಹಿನ್ನೆಲೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ KSRTC

ಬೆಂಗಳೂರು: ಹಬ್ಬಗಳು ಬಂದಿದ್ದರೆ ಸಾಕು ಹಲವಾರು ಜನರು ಊರಿಗೆ ಹೋಗುತ್ತಾರೆ. ಇದನ್ನೇ  ಸರಿಯಾಗಿ ಉಪಯೋಗಿಸಿಕೊಳ್ಳುವ ಖಾಸಗಿ ಬಸ್ಗಳು ಟಿಕೆಟ್ ದರದಲ್ಲಿ ಬಾರಿ ಏರಿಕೆ ಮಾಡುತ್ತಿದ್ದಾರೆ. ಇದರಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಸಾರಿಗೆ ಇಲಾಖೆಯು ಸಿಹಿ ಸುದ್ದಿಯನ್ನು ನೀಡಿದೆ.

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಾರಿಗೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಏಪ್ರಿಲ್ 6 ರಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ಅನುಕೂಲವಾಗಲೆಂದು ಸಾರಿಗೆ ಇಲಾಖೆಯು ಒಟ್ಟು 2275 ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ: 06.04.2024 ರಿಂದ ದಿನಾಂಕ 08.04.2024 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2275 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

ಫ್ರೆಶ್ ನ್ಯೂಸ್

Latest Posts

Featured Videos