ಖಾಸಗಿ ಚಾಲಕರಿಗೆ ಗುಡ್ ನ್ಯೂಸ್ ನೀಡುವ ನಿರ್ಧಾರದಲ್ಲಿ ಸರ್ಕಾರ!

ಖಾಸಗಿ ಚಾಲಕರಿಗೆ ಗುಡ್ ನ್ಯೂಸ್ ನೀಡುವ ನಿರ್ಧಾರದಲ್ಲಿ ಸರ್ಕಾರ!

ಬೆಂಗಳೂರು:  ರಾಜ್ಯದಲ್ಲಿ ಅನೇಕ ವರ್ಷಗಳಿಂದ ತಮಗೂ ಒಂದು ನಿಗಮ ಮಂಡಳಿ ಬೇಕು ಅಂತಾ ಸರ್ಕಾರದ ಮುಂದೆ ಖಾಸಗಿ ಚಾಲಕರು ಬಿಗಿ ಪಟ್ಟು ಹಿಡಿದಿದ್ದರು. ಜೊತೆಗೆ ಹಲವು ಬಾರಿ ರಸ್ತೆಗಿಳಿದು ಹೋರಾಟವನ್ನೂ ಮಾಡಿದ್ದರು. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಸದ್ಯ ಈಗ ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ಮಂಡಳಿ ಸ್ಥಾಪನೆಗೆ ಮುಂದಾಗಿದೆ.

ಮಂಡಳಿ ಸ್ಥಾಪನೆ ಸಂಬಂಧ ಈಗಾಗಲೇ ಕಾರ್ಮಿಕ ಇಲಾಖೆ ಜೊತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ರೆಡ್ಡಿ ಮಾತುಕತೆ ಕೂಡ ನಡೆಸಿದ್ದಾರೆ. ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಕೂಡ ಚರ್ಚೆ ನಡೆಸಿದ್ದು, ಮಂಡಳಿ ಸ್ಥಾಪನೆ ಬಗ್ಗೆಯೂ ತೀರ್ಮಾನ ಆಗಿದೆ. ಕಾರ್ಮಿಕ ಇಲಾಖೆ ಅಡಿ ಪ್ರತ್ಯೇಕ ಮಂಡಳಿಗೆ ಚರ್ಚೆ ಆಗಿದ್ದು, ಶೀಘ್ರದಲ್ಲೇ ಕ್ಯಾಬಿನೆಟ್ ನಲ್ಲೂ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.ಇನ್ನೂ ಚಾಲಕರ ನಿಗಮ ಮಂಡಳಿಯಿಂದ ಸಾಕಷ್ಟು ಅನುಕೂಲ ಆಗಲಿದೆ. ಚಾಲಕರ ಮಕ್ಕಳ ವಿದ್ಯಾಭ್ಯಾಸದಿಂದ ಹಿಡಿದು ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಪ್ರಯೋಜನ ಆಗಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos