ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ! ಜಾಗ್ವಾರ್

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ! ಜಾಗ್ವಾರ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸಬರು ಹೆಚ್ಚಾಗಿ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇತರಹ ನಿಖಿಲ್ ಕುಮಾರಸ್ಷಾಮಿಯವರು ಮಾಡಿದ ಮೊದಲನೇ ಚಿತ್ರದಲ್ಲಿ ಕನ್ನಡಿಗರ ಮನಸ್ಸನ್ನು ಕದ್ದರು. ಕನ್ನಡ ಚಿತ್ರರಂಗದಲ್ಲಿ ನಿಖಿಲ್‌ ಅವರಿಗೆ ಹೆಚ್ಚು ಅಭಿಮಾನಿ ಬಳಗ ಸೃಷ್ಟಿಯಾಗಿದ್ದಾರೆ. ಇವರು ಚಿತ್ರರಂಗದಲ್ಲಿ ಮಾತ್ರವಲ್ಲದೆ ರಾಜಕೀಯದಲ್ಲಿಯೂ ಸಹ ಫುಲ್ ಆಕ್ಟೀವ್ ಆಗಿದ್ದಾರೆ. ಇವರ ಕುಟುಂಬದವರು ರಾಜಕೀಯದಲ್ಲಿ ಹೆಚ್ಚು ಹೆಸರು ಮಾಡಿದ್ದಾರೆ. ದೇವೇಗೌಡರ ಕುಟುಂಬವೆಂದರೆ ಕರ್ನಾಟಕದಲ್ಲಿ ಹೆಚ್ಚು ಗೌರವ ಹಾಗೂ ಅಭಿಮಾನವಿದೆ.
ನಿಖಿಲ್ ಕುಮಾರಸ್ವಾಮಿ ಅವರ ನಟನೆಯ ಹೊಸ ಸಿನಿಮಾ ಈಗ ಸೆಟ್ಟೇರಿದೆ. ಈ ಚಿತ್ರಕ್ಕೆ ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಿದ್ದರು. ಇವರ ಮುಂದಿನ ಚಿತ್ರಕ್ಕೆ ಎಲ್ಲರೂ ಶುಭಹಾರೈಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos