ಬೆಂಗಳೂರು: ರಾಜ್ಯದಲ್ಲಿರುವ ರೈತರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಶೀಘ್ರವಾಗಿ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳನ್ನು ಇತ್ಯರ್ಥ ಮಾಡುವುದಾಗಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಈ ಕುರಿತಂತೆ ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ
ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಈ ಬಾರಿ ಬಗರ್ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.