ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ.

ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ.

ಹುಳಿಯಾರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಇಲಾಖೆ ಖಾಸಗೀಕರಣ ಸೇರಿದಂತೆ ರೈತರಿಗೆ ಮಾರಕಾವಾಗಿರುವ ಕರಾಳ ಸುಗ್ರೀವಾಜ್ಞೆ ವಾಪಸ್ ಪಡೆಯಲು ಒತ್ತಾಯಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹುಳಿಯಾರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಮುಂಜಾನೆಯಿಂದಲೇ ಅಂಗಡಿ ಮುಂಗಟ್ಟುಗಳು, ಕಾಫಿಟೀ ಅಂಗಡಿಗಳು, ಹೋಟೆಲ್‌ಗಳು, ದಿನಸಿ ಅಂಗಡಿಗಳು ಸೇರಿದಂತೆ ಎಲ್ಲಾ ರೀತಿಯ ಅಂಗಡಿಗಳು ಮುಚ್ಚಲ್ಪಟ್ಟಿತ್ತು. ಎಪಿಎಂಸಿಯಲ್ಲೂ ಸಹ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರು. ಆಟೋ ಚಾಲಕರ ಸಂಘದವರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ಆಟೋ-ಟ್ಯಾಕ್ಸಿಗಳ ಸಂಚಾರ ಇಲ್ಲದಾಗಿತ್ತು. ಕೆಎಸ್‌ಆರ್ ಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಇತ್ತು. ಬ್ಯಾಂಕ್ ,ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.
ಕರ್ನಾಟಕ ರಾಜ್ಯ ರೈತ ಸಂಘ, ಕರವಾ, ಸಿಐಟಿಯು, ಕಟ್ಟಡ ಕಾರ್ಮಿಕರ ಸಂಘ, ಇಟ್ಟಿಗೆ ತುಂಬುವವರ ಸಂಘ ಹೀಗೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಬೈಕ್ ರ‍್ಯಾಲಿ ನಡೆಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬಸ್ ನಿಲ್ದಾಣ, ಗಾಂಧಿ ಪೇಟೆ, ರಾಂಗೋಪಾಲ್ ಸರ್ಕಲ್, ಬಿ.ಹೆಚ್.ರಸ್ತೆ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪೋಲಿಸ್ ಠಾಣೆ ಬಳಿ ಸಾಂಕೇತಿಕವಾಗಿ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos