ಬೆಂಗಳೂರು, ಮಾ.15, ನ್ಯೂಸ್ ಎಕ್ಸ್ ಪ್ರೆಸ್: ಚೆಕ್ ಬೌನ್ಸ್ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೊಲೀಸರ ವಶಕ್ಕೆ ನೀಡಿ, ಬಳಿಕ ಬಿಡುಗಡೆ ಮಾಡಿದೆ.
ಜಾಮೀನು ರಹಿತ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಶಾಸಕರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು, ಪೊಲೀಸರು ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ವಶಕ್ಕೆ ಪಡೆದರು.
ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ವಿಚಾರಣೆ ನಡೆಸಿದ ಕೋರ್ಟ್, ಗೈರು ಹಾಜರಾತಿಗೆ 100 ರೂ. ದಂಡ ವಿಧಿಸಿ ಬಿಡುಗಡೆ ಮಾಡಿತು. ಅಷ್ಟೇ ಅಲ್ಲದೇ ಮತ್ತೆ ವಿಚಾರಣೆಗೆ ಗೈರಾದರೆ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ.