ಸರ್ಕಾರದಿಂದ ಸಂತ್ರಸ್ತರಿಗೆ ಸೀರೆ, ವಸ್ತ್ರ ವಿತರಣೆ

ಸರ್ಕಾರದಿಂದ ಸಂತ್ರಸ್ತರಿಗೆ ಸೀರೆ, ವಸ್ತ್ರ ವಿತರಣೆ

ಬೆಂಗಳೂರು, ಆ. 12 : ಬೆಳಗಾವಿ ಜಿಲ್ಲೆಯ ಸಂತ್ರಸ್ತರಿಗೆ ಧಾರ್ಮಿಕ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಹರಕೆ ರೂಪದಲ್ಲಿ ಸಂಗ್ರಹವಾಗಿರುವ ಸೀರೆ, ವಸ್ತ್ರಗಳನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಜನ ಸಂಕಷ್ಟಕ್ಕೆ ಸಿಲಿಕಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳು ತೀವ್ರ ಹಾನಿಗೆ ತುತ್ತಾಗಿರು ಹಿನ್ನಲೆ ಮಾನವೀಯತೆ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ನೆರೆ ಸಂತ್ರಸ್ತರಿಗೆ ಇಲಾಖೆ ವ್ಯಾಪ್ತಿಯಲ್ಲಿನ ಪ್ರಮುಖ ದೇವಾಲಯಗಳಲ್ಲಿ ಭಕ್ತಾದಿಗಳು ಹರಕೆ ರೂಪದಲ್ಲಿ ನೀಡಿರುವ ಸೀರೆ ಹಾಗೂ ವಸ್ತ್ರಗಳನ್ನು ವಿತರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಂತ್ರಸ್ತರಿಗೆ ಪೂರೈಸುವ ಸಲುವಾಗಿ ಆಯಾಯ ದೇವಾಲಯಗಳಲ್ಲಿ ಲಭ್ಯವಿರುವ ಸೀರೆ, ವಸ್ತ್ರಗಳನ್ನು ಸಂಗ್ರಹ ಮಾಡಿ ಆಗಸ್ಟ್ 12ರಂದು ಮಧ್ಯಾಹ್ನದ ಒಳಗಾಗಿ ಬೆಳಗಾವಿ ಜಿಲ್ಲಾಧಿಕಾರಿ ವಶಕ್ಕೆ ನೀಡಬೇಕು. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೇಲುಸ್ತುವಾರಿ ವಹಿಸಬೇಕು. ಟ್ಟೆದೇವಾಲಯಗಳಿಂದ ಸಂಗ್ರಹಿಸಲಾಗಿದೆ ಹಾಗೂ ವಿತರಣೆ ಮಾಡಲಾಗಿದೆ ಎಂಬ ಅಂಕಿ-ಅಂಶಗಳೊಂದಿಗೆ ಸ್ವೀಕೃತಿ ನಿರ್ವಹಿಸಬೇಕು.  ಮೈಸೂರು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯ ಹಾಗೂ ಬೆಳಗಾವಿಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಾಲಯದ ನಿಧಿಯಿಂದ ಭರಿಸಬೇಕು ಎಂದು ಕಂದಾಯ ಇಲಾಖೆಯ ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos