ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಸರ್ಕಾರಿ ಶಾಲೆಗಳ ನವೀಕರಣಕ್ಕೆ ಸಿಎಸ್ಆರ್ ಅನುದಾನದಡಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತಾಗಿ ಇದು ಮಹತ್ವದ ಚರ್ಚೆ ನಡೆಯಿತು.
ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿ ಎಸ್ ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳ ಪೂರೈಕೆಯ ಕುರಿತು ಇಂದು (ಗುರುವಾರ ಜೂನ್ 12) ರಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ರವರ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು.
ಸಿಎಸ್ ಆರ್ ಅನುದಾನದಡಿ ಶಾಲೆಗಳ ನವೀಕರಣ ಹಾಗೂ ಶಾಲೆಗಳಲ್ಲಿ ಹಚ್ಚಿನ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಶಾಲೆಗಳ ನಿರ್ಮಾಣಮಾಡಲು ಸಭೆಯಲ್ಲಿ ಚರ್ಚೆ ನಡೆಸಿದರು.
ಮಕ್ಕಳ ಕಲಿಕೆಗೆ ಸಹಕಾರವಾಗಲು ಹೆಚ್ಚಿನ ತಂತ್ರಜ್ಞಾನ ಒಳಗೊಂಡ ಪ್ರಯೋಗಾಲಯ ಹಾಗೂ ಮಕ್ಕಳಿಗೆ ಸೂಕ್ತ ಕಲಿಕೆಯ ವಾತಾವರಣ ನಿರ್ಮಿಸಲು ಸಚಿವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕಿಯೋನಿಕ್ಸ್ಸ್ ಅಧ್ಯಕ್ಷರಾದ ಶರತ್ ಕುಮಾರ್ ಬಚ್ಚೇಗೌಡ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್,ಶಿಕ್ಷಣ ಇಲಾಖೆಯ ಆಯುಕ್ತರಾದ ತ್ರಿಲೋಕ್ ಚಂದ್ರ ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಎ.ಬಿ.ಬಸವರಾಜು, ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರಾದ ಬೈಲಾಂಜನಪ್ಪ,ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.