ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಒಂದು ಕೈ ಮೇಲು

ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಒಂದು ಕೈ ಮೇಲು

ದೇವನಹಳ್ಳಿ, ಜು. 18 : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಖಾಸಗಿ ಶಾಲೆಗಿಂತಲೂ ಸರ್ಕಾರಿ ಶಾಲೆ ಯಾವುದರಲ್ಲೂ ಕಡಿಮೆ ಇಲ್ಲ : ಜಿಪಂ ಸದಸ್ಯ ಕೆಸಿ ಮಂಜುನಾಥ್

ಕಲಿಯುವ ಸಮಯದಲ್ಲಿ ಸಮಯ ವ್ಯರ್ಥ ಮಾಡಬಾರದು. ಕಳೆದು ಹೋದ ಸಮಯ ಮತ್ತೇ ಬರುವುದಿಲ್ಲವೆಂಬುವುದನ್ನು ವಿದ್ಯಾರ್ಥಿಗಳು ಹರಿಯಬೇಕು. ಗುರು ಹಿರಿಯನ್ನು ಗೌರವಿಸಿ ಅವರ ನಡೆಯಲ್ಲಿ ನಡೆದಾಗ ಯಶಸ್ಸು ನಮ್ಮದಾಗುತ್ತದೆ ಎಂದು ಜಿಪಂ ಸದಸ್ಯ ಕೆಸಿ ಮಂಜುನಾಥ್ ತಿಳಿಸಿದರು.

ತಾಲೂಕಿನ ಕನ್ನ ಮಂಗಲ ಪಾಳ್ಯದ ಸರ್ಕಾರಿ ಉರ್ದು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ಸಮಾಜದಲ್ಲಿ ಬಡ ಮಕ್ಕಳಿಗೆ ತಮ್ಮ ಕೈಲಾದ ಸಹಾಯವನ್ನು ಓದುವುದಕ್ಕಾಗಿ ಮಾಡಿದರೆ ಅವರ ಜೀವನ ರೂಪಿಸುವಂತೆ ಆಗುವುದು. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಮಕ್ಕಳಿಗೆ ನೋಟ್ ಪುಸ್ತಕ ನೀಡಿದರೆ ವಿದ್ಯಾಬ್ಯಾಸಕ್ಕೆ ಅನುಕೂಲವಾಗುವುದು.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರ್ಕಾರಿ ಶಾಲೆಗಳಿಗೆ  ನೀಡುತ್ತಿದೆ. ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಮಕ್ಕಳ ಹಾಜರಾತಿ ಸಂಖ್ಯೆ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗುತ್ತಿದೆ. ಟಿವಿ, ಮೊಬೈಲ್ಗಳಿಂದ ದೂರವಿದ್ದು, ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಪ್ರತಿಯೊಂದು ವಿಷಯಗಳಿಗೂ ವಿಷಯವಾರು ಶಿಕ್ಷಕರಿದ್ದಾರೆ. ಉತ್ತಮ ವಾತಾವರಣ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಕ್ಕಳ ಕಲಿಕೆಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಖಾಸಗಿ ಶಾಲೆಗಿಂತಲೂ ನಾವೇನು ಕಮ್ಮಿ ಇಲ್ಲವೆಂದು ತೋರಿಸುತ್ತಿದ್ದೇವೆ. ಸರ್ಕಾರ ಪ್ರತಿ ವರ್ಷ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉಚಿತ ಪುಸ್ತಕ, ಸಮವಸ್ತ್ರ, ಬಿಸಿಯೂಟ, ಕ್ಷೀರ ಭಾಗ್ಯ, ಹೀಗೆ ಹಲವಾರು ರೀತಿಯ ಸೌಲಭ್ಯಗಳನ್ನು ಮಕ್ಕಳಿಗೆ ನೀಡುತ್ತಿದೆ ಎಂದು ಹೇಳಿದರು.

ಈ ವೇಳೆಯಲ್ಲಿ ಜಿಪಂ ಸದಸ್ಯ ಕೆಸಿ ಮಂಜುನಾಥ್ ಪತ್ನಿ ರೂಪಾ, ಗ್ರಾಪಂ ಸದಸ್ಯರಾದ ಸೋಮಶೇಖರ್, ನಜೀರ್ ಅಹಮದ್ ಹಾಗೂ ಗ್ರಾಮದ ಮುಖಂಡರು, ಶಿಕ್ಷಕರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos