ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ

ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ

ದೇವನಹಳ್ಳಿ, ಆ. 6: ಸರ್ಕಾರಿ ನೌಕರರ ಭವನದ ಕಟ್ಟಡವನ್ನು ನಿರ್ಮಾಣ ಮಾಡಿ ಸರ್ಕಾರಿ ನೌಕರರಿಗೆ ಹೆಚ್ಚು ಅನುಕೂಲವಾಗುವಂತೆ ಮಾಡಲಾಗುವುದು ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಪ್ರಭಾರಿ ತಹಶೀಲ್ದಾರ್ ಬಾಲಕೃಷ್ಣ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧದ ಪಕ್ಕದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಸಂಘದ ಭವನಕ್ಕೆ ಜಿಲ್ಲಾಧಿಕಾರಿ ಕರೀಗೌಡ ನೇತೃತ್ವದಲ್ಲಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಬಹಳ ವರ್ಷಗಳಿಂದ ಹಳೆಯ ಮತ್ತು ಕಿರಿದಾದ ಜಾಗದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಕಚೇರಿ ಕಾರ್ಯನಿರ್ವಹಿಸುತ್ತಿತ್ತು. ನಮ್ಮ ಎಲ್ಲಾ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚಿಸಿ, ತೀರ್ಮಾನಿಸಿದಂತೆ ಸುಸ್ಸಜ್ಜಿತವಾದ ಕಟ್ಟಡ ನಿರ್ಮಾಣಕ್ಕೆ ನಡವಳಿಯನ್ನು ಮಾಡಿ, ದಾನಿಗಳಾದ ಚೇತನ್ ಗೌಡ ಸಹಭಾಗಿತ್ವದಲ್ಲಿ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದರು.

ಸಮಾಜ ಸೇವಕ ಜುಟ್ಟನಹಳ್ಳಿ ಚೇತನ್ ಗೌಡ ಮಾತನಾಡಿ, ಕಂದಾಯ ಕೆಲಸಗಳನ್ನು ಮಾಡಲು ಕಡತಗಳನ್ನು ಸುರಕ್ಷಿತವಾಗಿಡಲು ಸುಸ್ಸಜ್ಜಿತವಾದ ಕಟ್ಟಡ ಅವಶ್ಯಕತೆ ಇದೆ ಎಂದು ಪ್ರಭಾರ ತಹಶೀಲ್ದಾರ್ ನನ್ನ ಬಳಿ ಬೇಡಿಕೆ ಇಟ್ಟಿದ್ದರು. ಅದರಂತೆ ನನ್ನ ಕೈಲಾದ ಸಹಕಾರ ನೀಡಿ ಕಟ್ಟಡ ಕಟ್ಟಿಸಿಕೊಡಲು ಒಪ್ಪಿಕೊಂಡು ಕಾಮಗಾರಿ ಮಾಡಲಾಗಿದೆ. ಜನಸಾಮಾನ್ಯರ ಕೆಲಸಗಳನ್ನು ಮಾಡುವಂತಹ ಅಧಿಕಾರಿಗಳಿಗೆ ಸುವ್ಯವಸ್ಥಿತವಾದ ಕಚೇರಿ ಇಲ್ಲದಿರುವುದನ್ನು ಮನದಲ್ಲಿಟ್ಟುಕೊಂಡು ಈ ಕಾರ್ಯಕ್ಕೆ ಮುಂದಾಗಿದ್ದೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎಸ್ ಕರೀಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಜಿಲ್ಲಾ ಕಚೇರಿ ಸಿಬ್ಬಂದಿ ಚೇತನ್, ಕಂದಾಯ ಇಲಾಖಾಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಮತ್ತಿತರರು ಇದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos