ಗ್ರಾಮ ವಾಸ್ಯವ್ಯದಿಂದ ಹೊಸ ಅನುಭವ: ಸಿಎಂ

ಗ್ರಾಮ ವಾಸ್ಯವ್ಯದಿಂದ ಹೊಸ ಅನುಭವ: ಸಿಎಂ

ಬೀದರ್, ಜೂ. 28: ಕಳೆದ ವಾರದಿಂದ ರಾಜ್ಯದ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಹೌದು, ಉಜಳಂಬದಲ್ಲಿ ಇಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ವಾಸ್ತವ್ಯವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ ಎಂದರು. ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಜನತಾದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಈ ಗ್ರಾಮವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.

ಯಾದಗಿರಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಾಡಿದ ಗ್ರಾಮವಾಸ್ತವ್ಯದಲ್ಲಿ ಬಂದ ಮನವಿಗಳ ಪೈಕಿ ಆಯಾ ಪ್ರದೇಶಗಳ  ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳು ಕೆಲವು ಇವೆ. ಸಾವಿರಾರು ಜನರು ಕುಟುಂಬದಲ್ಲಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ನಾವು ಗಮನ ಕೊಡುತ್ತೇವೆ ಎಂದು ವಿವರಿಸಿದರು.

ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಸಿಎಂ ಕಚೇರಿಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ತಾಯಿ ಹೃದಯದಿಂದ ಕೆಲಸ ಮಾಡಿರುವುದು ಕೂಡ ನಮ್ಮ ಬಲವಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಿಎಂ ಕಚೇರಿಯಿಂದ ನೇರವಾಗಿ ಸೌಕರ್ಯ ಸಿಗಲಿದೆ ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos