ಹೈದರಾಬಾದ್, ಸೆ. 6 : ಮೊಮ್ಮಕ್ಕಳು ಕಾಣುವ ವಯಸ್ಸಿನಲ್ಲಿ 74ರ ಅಜ್ಜಿಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಇತ್ತೀಚೆಗೆ ರಾಜಸ್ತಾನ ಮೂಲದ ದಲ್ಜಿಂಧರ್ ಕೌರ್ ತಮ್ಮ 70ರ ವಯಸ್ಸಿನಲ್ಲಿ ತಾಯಿಯಾಗಿ ದಾಖಲೆ ಬರೆದಿದ್ದರು. ದಾಖಲೆ ಮಂಗಯಮ್ಮ ಮುರಿದು ಅತ್ಯಂತ ಹಿರಿಯ ವಯಸ್ಸಿನಲ್ಲಿ ಮಕ್ಕಳನ್ನು ಹೆತ್ತ ಭಾರತೀಯ ಮಹಿಳೆ ದಾಖಲೆ. 57 ವರ್ಷಗಳಿಂದ ಮಕ್ಕಳಿಲ್ಲದೇ ಕೊರಗುತ್ತಿದ್ದರು. ಇದೀಗ ಯಾರದ್ದೋ ದಾನಿಯ ಅಂಡಾಣು,ರಾಜಾ ರಾವ್ ವೀರ್ಯಾಣು ಪಡೆದು ಐವಿಎಫ್ ತಂತ್ರಜ್ಞಾನದ ಮೂಲಕ ಮಂಗಾಯಮ್ಮ ಗರ್ಭವತಿಯಾದರು.
ಆಂಧ್ರಪ್ರದೇಶದ ಗುಂಟೂರು ನಗರದಲ್ಲಿ 74 ವರ್ಷದ ವೃದ್ಧೆಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿ ದಾಖಲೆ ನಿರ್ಮಿಸಿದ್ದಾರೆ. ಇಳಿ ವಯಸ್ಸಿನಲ್ಲಿ 2 ಮಕ್ಕಳಿಗೆ ಜನ್ಮನೀಡಿ ತಾವು ತಾಯಿಯಾಗುವ ಬಯಕೆತೀರಿಸಿಕೊಂಡಿದ್ದಾರೆ. ಮಗುವಿಗೆ ಜನ್ಮ ನೀಡೋದಾ ಎಂದು ಅಚ್ಚರಿ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನೆಲ್ಲಪಾರ್ತಿಪಾಡು ಗ್ರಾಮದ ನಿವಾಸಿ ಎರ್ರಮಟ್ಟಿ ಮಂಗಯಮ್ಮ(74) ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.