PBKS ವಿರುದ್ದ GT ತಂಡಕ್ಕೆ ಭರ್ಜರಿ ಜಯ

PBKS ವಿರುದ್ದ GT ತಂಡಕ್ಕೆ ಭರ್ಜರಿ ಜಯ

ಬೆಂಗಳೂರು: ನಿನ್ನೆ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 37ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ತಂಡದ ವಿರುದ್ಧ ಗುಜರಾತ್‌ ಟೈಟನ್ಸ್ ತಂಡ ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಮೂಲಕ ಗುಜರಾತ್‌ ಟೈಟನ್ಸ್ ತಂಡವು ಐಪಿಎಲ್ 2024ರಲ್ಲಿ ಆಡಿದ 8 ಪಂದ್ಯಗಳಲ್ಲಿ 4 ಗೆಲುವು ಮತ್ತು 4 ಸೋಲು ಕಂಡಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಪಂಜಾಬ್ ಕಿಂಗ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ 2 ಗೆಲುವು ಮತ್ತು 6 ಸೋಲು ಅನುಭವಿಸಿದಂತಾಗಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲೇ ಮುಂದುವರೆದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಪರ ನಾಯಕ ಸ್ಯಾಮ್ ಕರ್ರಾನ್ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಉತ್ತಮ ಆರಂಭ ನೀಡಿದರು. ಹರ್‌ಪ್ರೀತ್ ಬ್ರಾರ್ 12 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 29 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ಸಾಯಿ ಕಿಶೋರ್ 4 ಓವರ್‌ಗಳಲ್ಲಿ 33 ರನ್ ನೀಡಿ 4 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ವಿಕೆಟ್ ಮತ್ತು ಮೋಹಿತ್ ಶರ್ಮಾ 2 ವಿಕೆಟ್ ಪಡೆದರು.

ಯಾವುದೇ ಅರ್ಧಶತಕ ಗಳಿಸದ ಹೊರತಾಗಿಯೂ, ನಿಗದಿತ 20 ಓವರ್‌ಗಳಲ್ಲಿ 142 ರನ್‌ಗಳಿಗೆ ಸರ್ವಪತನ ಕಂಡಿತು. ಶುಭ್ಮನ್ ಗಿಲ್ ಪಡೆಯ ಸಂಘಟಿತ ಬೌಲಿಂಗ್‌ ದಾಳಿಗೆ ಪತರಗುಟ್ಟಿದ ಪಂಜಾಬ್‌ ಬ್ಯಾಟರ್ಸ್, ಸಾಲು ಸಾಲು ವಿಕೆಟ್‌ ಕಳೆದುಕೊಂಡು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಇನ್ನು 143 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಗುಜರಾತ್‌ ತಂಡ ತನ್ನ ಆಲ್‌ರೌಂಡ್ ಪ್ರದರ್ಶನ ನೆರವಿನಿಂದ 19.1 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 146 ರನ್‌ಗಳ ಗುರಿ ತಲುಪಿ ಗೆಲುವಿನ ಕೇಕೆ ಹಾಕಿತು. ಗುಜರಾತ್‌ ತಂಡದ ಪರ ಇನ್ನಿಂಗ್ಸ್ ಆರಂಭಿಸಿದ ನಾಯಕ ಶುಭ್ಮನ್ ಗಿಲ್ ಮತ್ತು ವೃದ್ಧಮಾನ್ ಸಹಾ ಉತ್ತಮ ಆರಂಭ ನೀಡಿದರು.

ನಂತರ ಬಂದ ಸಾಯಿ ಸುದರ್ಶನ್ ತಮ್ಮ ಆಲ್‌ರೌಂಡ್ ಪ್ರದರ್ಶನವನ್ನು ಮುಂದುವರೆಸಿದರು ಮತ್ತು 34 ಎಸೆತಗಳನ್ನು ಎದುರಿಸಿ 3 ಬೌಂಡರಿ ಮೂಲಕ 31 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇನ್ನು ಶಾರೂಕ್ ಖಾನ್ 8 ರನ್ ಗಳಿಸಿದರೆ, ರಶೀದ್ ಖಾನ್ 3 ರನ್ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos