ಗ್ಯಾರಂಟಿ ಯೋಜನೆ ಸಮಾವೇಶದ ಬಿಗ್‌ ಗೋಲ್ಮಾಲ್..!

ಗ್ಯಾರಂಟಿ ಯೋಜನೆ ಸಮಾವೇಶದ ಬಿಗ್‌ ಗೋಲ್ಮಾಲ್..!

ಧಾರವಾಡ: ರಾಜ್ಯದ ಜನತೆಗೆ ಒಳಿತಾಗಲೆಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದೀಗ ಧಾರವಾಡದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಬಹುದೊಡ್ಡ ಗೋಲ್ಮಾಲ್ ನಡೆದಿದೆ ಎಂಬ ಆರೋಪದ ಮೇರೆಗೆ ಇದೀಗ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಇದೀಗ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಎದುರಾಯಿತು ಮತ್ತೊಂದು ಸಂಕಷ್ಟ

ಕಳೆದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಒಂದು ಸಮಾವೇಶದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ ಲೆಕ್ಕಪತ್ರಗಳೇ ಏರುಪೇರಾಗಿವೆ ಎಂದು ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಅವರು ಪಡೆದ ಮಾಹಿತಿಯಲ್ಲಿ ಬಹಿರಂಗಗೊಂಡಿದೆ.

ಈ ಸಮಾವೇಶದ ದಿನಾಂಕ ಮತ್ತು ಖರ್ಚು ವೆಚ್ಚದ ದಾಖಲೆಗಳೇ ಏರುಪೇರಾಗಿವೆ. ಸಮಾವೇಶ ಮುಗಿದ ಬಳಿಕ ಊಟದ ಕೊಟೇಶನ್ ಪಡೆಯಲಾಗಿದೆ. ಕೊಟೇಶನ್ ಸಲ್ಲಿಕೆಗೂ ಮುನ್ನವೇ ಊಟ, ಉಪಾಹಾರ ಪೂರೈಕೆ ಮಾಡಲಾಗಿದೆ. ಕುಂದಗೋಳ ಸಮಾವೇಶದಲ್ಲಿನ ಊಟ, ಉಪಹಾರದ ಕೊಟೇಶನ್‌ಗೆ ಸಹಿಯೇ ಇಲ್ಲ. ಆದರೂ ಏಜೆನ್ಸಿಯೊಂದಕ್ಕೆ ಊಟ, ಉಪಹಾರದ ಜವಾಬ್ದಾರಿಯನ್ನು ಜಿಲ್ಲಾಡಳಿತ ವಹಿಸಿಕೊಟ್ಟಿತ್ತು. ಈ ಸಮಾವೇಶಗಳ ಬಹುತೇಕ ಲೆಕ್ಕಪತ್ರಗಳು ಸರಿಯಾಗಿಲ್ಲ ಎಂದು ಆರೋಪಿಸಿರುವ ಆರ್‌ಟಿಐ ಕಾರ್ಯಕರ್ತ, ಗ್ಯಾರಂಟಿ ಸಮಾವೇಶದ ಕಾರ್ಯಕ್ರಮ ನಿರ್ವಹಣಾ ಸಮಿತಿ ವಿರುದ್ಧ ದೂರು ದಾಖಲಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos