ತುಮಕೂರು, ಅ. 9 : ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಹೇಳಿಕೆ ಈ ಸುಳಿವಿಗೆ ಇನ್ನಷ್ಟು ಪುಷ್ಠಿ ನೀಡಿದೆ. ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಅವರು ಎಸ್.ಆರ್ ಶ್ರೀನಿವಾಸ್ ಮನೆಗೆ ಹೋಗಿ ಬಿಜೆಪಿಯಿಂದ ಸ್ಪರ್ಧಿಸುವಂತೆ ಒತ್ತಡ ಹಾಕಿದ್ದಾರೆ. ಯಡಿಯೂರಪ್ಪಗೆ ಹೇಳಿ ಟಿಕೆಟ್ ಕೊಡಿಸುವುದಾಗಿ ಹೇಳಿದ್ದಾರೆ ಎಂದು ಎಸ್ ಆರ್ ಶ್ರೀನಿವಾಸ್ ತಿಳಿಸಿದ್ದಾರೆ.