ಹೆಚ್ಎಎಲ್ ನೇಮಕಾತಿ ಪಿಆರ್ಟಿ ಮತ್ತು ಟಿಜಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಎಎಲ್ ನೇಮಕಾತಿ ಪಿಆರ್ಟಿ ಮತ್ತು ಟಿಜಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮಾ. 30, ನ್ಯೂಸ್ ಎಕ್ಸ್ ಪ್ರೆಸ್: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಪಿಆರ್ಟಿ ಮತ್ತು ಟಿಜಿಟಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಬಿಎ ಜೊತೆಗೆ ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಪಿಆರ್ಟಿ-ಇಂಗ್ಲೀಷ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರೂ ಮತ್ತು ಪಿಆರ್ಟಿ- ಸೋಷಿಯಲ್ ಸ್ಟಡೀಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರೂ ಮತ್ತು ಟಿಜಿಟಿ-ಇಂಗ್ಲೀಷ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿದಾನ: ಅಭ್ಯರ್ಥಿಗಳು ಹೆಚ್ಎಎಲ್ನ ಅಧಿಕೃತ ವೆಬ್ಸೈಟ್ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏ.10,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ: ಹೆಚ್ಎಎಲ್ ನ್ಯೂ ಪಬ್ಲಿಕ್ ಸ್ಕೂಲ್, ಸೆಂಟ್ರಲ್ ಟೌನ್ಶಿಪ್, ಜವಾಹರ್ ನಗರ, ನಮ್ಜೋಶಿ ರೋಡ್,ಮಾರಥಹಳ್ಳಿ ಪೋಸ್ಟ್, ಬೆಂಗಳೂರು-560037

ಫ್ರೆಶ್ ನ್ಯೂಸ್

Latest Posts

Featured Videos