ಹೆಚ್.ಡಿ.ದೇವೇಗೌಡರ ಪರ ಇಂದು ಪರಮೇಶ್ವರ್ ಪ್ರಚಾರ

ಹೆಚ್.ಡಿ.ದೇವೇಗೌಡರ ಪರ ಇಂದು ಪರಮೇಶ್ವರ್ ಪ್ರಚಾರ

ತುಮಕೂರು, . 9, ನ್ಯೂಸ್ ಎಕ್ಸ್ ಪ್ರೆಸ್: ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಡಿಸಿಎಂ ಪರಮೇಶ್ವರ್ ಇಂದು ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ತಮ್ಮ ಸ್ವಕ್ಷೇತ್ರ ಕೊರಟಗೆರೆ ತಾಲೂಕಿನ ಪುರವಾರ ಗ್ರಾಮದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಕಸಬಾ ಹೋಬಳಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಹೊಳವನಹಳ್ಳಿ ಹೋಬಳಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಪರಮೇಶ್ವರ್ ಜೊತೆಗೆ ಸಚಿವ ಎಸ್ ಆರ್.ಶ್ರೀನಿವಾಸ್ ಸಾಥ್ ನೀಡಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos