ತಿಮ್ಮನಹೊಸಹಳ್ಳಿ ಹಾಡಿಯಲ್ಲಿ ಇಬ್ಬರು ಅನುಮಾನಾಸ್ಪದ ಸಾವು

ತಿಮ್ಮನಹೊಸಹಳ್ಳಿ ಹಾಡಿಯಲ್ಲಿ ಇಬ್ಬರು ಅನುಮಾನಾಸ್ಪದ ಸಾವು

ಮೈಸೂರು: ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ತಿಮ್ಮನಹೊಸಹಳ್ಳಿ ಹಾಡಿಯಲ್ಲಿ ಇಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಚಂದ್ರು(45), ಭಾಸ್ಕರ್(34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮೈಸೂರು ವೈದ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ, ಅವರಿಬ್ಬರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಿರುವಾಗಲೇ ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಆದರೆ, ಸ್ಥಳೀಯರು ಇದನ್ನು ನಿರಾಕರಿಸಿದ್ದು, ಕೇರಳ ಭಾಗದಿಂದ ಮಂಗನ ಕಾಯಿಲೆ ವ್ಯಾಪಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಚಂದ್ರು ಮತ್ತು ಭಾಸ್ಕರ್ ಅವರ ಅನುಮಾನಾಸ್ಪದ ಸಾವಿನ ಕುರಿತಾಗಿ ತನಿಖೆ ಕೈಗೊಳ್ಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos