ಹಫೀಜ್ ವ್ಹೀಲಿಂಗ್ ಕಾಂಪಿಟೇಷನ್ಗೂ ಕಮ್ಮಿಯಿಲ್ಲ

ಹಫೀಜ್ ವ್ಹೀಲಿಂಗ್ ಕಾಂಪಿಟೇಷನ್ಗೂ ಕಮ್ಮಿಯಿಲ್ಲ

ಬಳ್ಳಾರಿ, ಅ. 14 : ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕರೊಬ್ಬರ ಮಗನ ಕಾರು-ಬಾರು ಬಲು ಜೋರಾಗಿದ್ದು, ನಡು ರಸ್ತೆಯಲ್ಲೇ ವ್ಹೀಲಿಂಗ್ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದಾನೆ. ಮಿತಿ ಮೀರಿದ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ಹಫೀಜ್ ಶೇಖ್ ಡಿವೈಡರ್ ಮೇಲೆ ಕಾರು ಹತ್ತಿಸಿ, ಒನ್ ಸೈಡ್ ಕಾರ್ ವ್ಹೀಲಿಂಗ್ ಕಾಂಪಿಟೇಷನ್ಗೂ ಕಮ್ಮಿಯಿಲ್ಲದಂತೆ ಕಾರನ್ನು ಹಾರಿಸುತ್ತಾನೆ. ವ್ಹೀಲಿಂಗ್ ಮಾಡಿದ ಫೋಟೋ, ವಿಡಿಯೋ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾನೆ. ಇದನ್ನು ಕಂಡ ಇತರೆ ಯುವಕರು ಕೂಡ ವ್ಹೀಲಿಂಗ್ ಚಟಕ್ಕೆ ಮುಂದಾಗುತ್ತಿದ್ದಾರೆ. ಸಂಡೂರು, ಹಗರಿಬೊಮ್ಮನಹಳ್ಳಿ, ವ್ಹೀಲಿಂಗ್ ಕ್ರೇಜ್ ಮಿತಿಮೀರಿದ್ದು, ರಾಜ್ಯದ ಹಲವೆಡೆಯೂ ಕಾರು-ಬೈಕ್ ವ್ಹೀಲಿಂಗ್ ಮಾಡುವುದನ್ನು ಕೈ ನಾಯಕನ ಮಗ ಹಫೀಜ್ ಶೇಖ್ ಹವ್ಯಾಸವಾಗಿಸಿಕೊಂಡಿದ್ದಾನೆ. ನಡು ರಸ್ತೆಯಲ್ಲಿಯೇ ಮನಬಂದಂತೆ ಗಾಡಿ ಚಲಾಯಿಸಿ, ವ್ಹೀಲಿಂಗ್ ಮಾಡಿದರೂ ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ವ್ಹೀಲಿಂಗ್ ಮಾಡುವುದು ಕಾನೂನು ಬಾಹಿರವಾಗಿದ್ದರೂ ಈ ಕುರಿತು ಪೊಲೀಸರು ಈವರೆಗೆ ಕ್ರಮ ಕೈಗೊಂಡಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos