ಹೆಚ್ಎಎಲ್ ನೇಮಕಾತಿ ಅಕೌಂಟ್ಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಎಎಲ್ ನೇಮಕಾತಿ ಅಕೌಂಟ್ಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, . 3, ನ್ಯೂಸ್ ಎಕ್ಸ್ ಪ್ರೆಸ್: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಕೌಂಟ್ಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೆ 2,2019 ರೊಳಗೆ ಕಳುಹಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಯಾವುದೇ ಪದವಿ ಅಥವಾ ಎಸ್ಎಸ್ಎಲ್ಸಿ +ಪೂರ್ಣಕಾಲಿಕ ಡಿಪ್ಲೋಮ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಅಕೌಂಟ್ಸ್ ಟ್ರೈನಿ ಹುದ್ದೆಗಳಿಗೆ ಮೇ 2,2019 ರ ಅನ್ವಯ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,750/- ರಿಂದ 27,670/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು: ಅಭ್ಯರ್ಥಿಗಳುಆನ್ಲೈನ್ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಕೃತ ವೆಬ್ಸೈಟ್ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬಹುದು.

ಕಚೇರಿಯ ವಿಳಾಸ: ಹೆಚ್ಎಎಲ್ ಕಾರ್ಪೋರೇಟ್ ಆಫೀಸ್,15/1 ಕಬ್ಬನ್ ರೋಡ್, ಬೆಂಗಳೂರು 560001.

ಫ್ರೆಶ್ ನ್ಯೂಸ್

Latest Posts

Featured Videos