ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ

ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ

ಬೆಂಗಳೂರು, ಜ. 07: ಕಾಗಿನಲೆ ಮಹಾಸಂಸ್ಥಾನ ಕನಕ ಗುರುಪೀಠ ಹಾಲುಮತ ಕೇಂದ್ರದ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ ನಲ್ಲಿ ಜ.12, 13,  ಮತ್ತು 14 ರಂದು ಹಾಲುಮತದ ಸಂಸ್ಕೃತಿ ವೈಭವ-2020 ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.12 ರಂದು ಬೆಳಿಗ್ಗೆ 9ಕ್ಕೆ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿವುದು. ಧ್ವಜಾರೋಹಣವನ್ನು ಹೈದ್ರಾಬಾದಿನ ವಿಧಾನ ಪರಿಷತ್ ಸದಸ್ಯ ಯುಗ್ಗೆ ಮಲ್ಲೇಶ್ವಂ ಅವರು ನೆರೆವೇರಿಸಲಿದ್ದಾರೆ. ನಂತರ ಬೆಳಿಗ್ಗೆ 9.30 ಕ್ಕೆ 108 ದೇವರ ಭಂಡಾರ ಪೂಜೆ ನಡೆಯಲಿದೆ ಎಂದು ತಿಳಿಸಿದರು.

ಜ.12 ರಂದು ಮಧ್ಯಾಹ್ನ 12ಕ್ಕೆ ಹಾಲುಮತ-ಗಂಗಾಮತ ಸಮಾವೇಶ ನಡೆಯಲಿದೆ. ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಜ.13ರಂದು ಬೆಳಗ್ಗೆ 9.30ಕ್ಕೆ ಕರ್ನಾಟಕ ಪ್ರಾದೇಶ ಕುರುಬ ಸಂಘದ ನೂತನ  ರಾಜ್ಯ ನಿರ್ದೇಶಕರಿಂದ ಕನಕ ಗುರುಪೀಠದ ಪೂಜ್ಯರಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ನಂತರ 11.30ಕ್ಕೆ ಆದಿವಾಸಿ ಸಂಸ್ಕೃತಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಫಗ್ಗನ್ ಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಅಡಗೂರು ಎಚ್. ವಿಶ್ವನಾಥ್ ಪ್ರಸ್ತಾವನೆ ಮಂಡಿಸಲಿದ್ದಾರೆ. ಕೇಂದ್ರ ಸಚಿವ ರೇಣುಕಾ ಸಿಂಗ್. ಸಚಿವ ಶ್ರೀರಾಮೂಲು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


 

ಫ್ರೆಶ್ ನ್ಯೂಸ್

Latest Posts

Featured Videos