ವೈದ್ಯರ ಮೇಲೆ ಹಲ್ಲೆ ಖಂಡಿಸಿ ಆಸ್ಪತ್ರೆ, ಮೆಡಿಕಲ್ ಬಂದ್

ವೈದ್ಯರ ಮೇಲೆ ಹಲ್ಲೆ ಖಂಡಿಸಿ ಆಸ್ಪತ್ರೆ, ಮೆಡಿಕಲ್ ಬಂದ್

ಕೊಪ್ಪಳ, ಜು. 18 : ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು. ಸಂಬಂಧಿಕರು ವೈದ್ಯ ಡಾ.ಅರ್ಜುನ್ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆ ಖಂಡಿಸಿ ಇಂದು ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಶಾಪ್ ಗಳನ್ನು ಬಂದ್ ಮಾಡಿ ಸಿಬ್ಬಂದಿ ಪ್ರತಿಭಟಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos