ಬೆಂಗಳೂರು, ಆ.20 : ದೋಸ್ತಿ ಸರ್ಕಾರದಲ್ಲಿ ಹಳೆ ಮೈಸೂರು ಭಾಗದ ಹಲವು ಶಾಸಕರು ಮಂತ್ರಿಯಾಗಿದ್ದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು, ಚಾಮರಾಜನಗರ, ಮಡಿಕೇರಿ, ಹಾಸನ ಯಾವ ಜಿಲ್ಲೆಗಳಿಗೂ ಸಿಎಂ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಮೈಸೂರು, ಮಡಿಕೇರಿ, ಹಾಸನ, ಚಾಮರಾಜನಗರ ಭಾಗದಲ್ಲಿ ಎಂಟು ಶಾಸಕರು ಇದ್ದರು ಒಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.
ಕಡೆ ಕ್ಷಣದವರೆಗೂ ರಾಮದಾಸ್ ಅವರಿಗೆ ಮಂತ್ರಿ ಸ್ಥಾನ ಖಚಿತ ಎಂದೇ ಭಾವಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಮದಾಸ್ ಅವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಅನಂತಕುಮಾರ್ ನಿಧನ, ವೈಯಕ್ತಿಕವಾದ ಕೇಸ್ ಗಳು, ಎಚ್. ವಿಶ್ವನಾಥ್ ಎಫೆಕ್ಟ್, ಆರ್ ಎಸ್ಎಸ್ ನಲ್ಲಿ ರಾಮದಾಸ್ ಪರ ಗಟ್ಟಿಯಾಗಿ ಮಾತನಾಡುವವರು ಇಲ್ಲದ ಕಾರಣ ಮಂತ್ರಿ ಸ್ಥಾನ ತಪ್ಪಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.