ಹಾಲು ರಸ್ತೆಯ ಪಾಲು

ಹಾಲು ರಸ್ತೆಯ ಪಾಲು

ಚಾಮರಾಜನಗರ, ಅ. 8 : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ನೂರಾರು ಲೀಟರ್ ಹಾಲು ರಸ್ತೆ ಪಾಲಾದ ಘಟನೆ ಚಾಮರಾಜನಗರದ ಹಳೆಯ ರೇಷ್ಮೆ ಮಾರುಕಟ್ಟೆ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಚಾಮುಲ್ ಡೇರಿಯಿಂದ ತಮಿಳುನಾಡಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಎತ್ತುವ ಕಾರ್ಯ ನಡೆಯುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos