ವಿಶ್ವಕಪ್: ಬೌಲಿಂಗ್ ವೇಳೆ ಗಾಯಗೊಂಡ ಹಾರ್ದಿಕ್ ಪಾಂಡ್ಯ..!

ವಿಶ್ವಕಪ್: ಬೌಲಿಂಗ್ ವೇಳೆ ಗಾಯಗೊಂಡ ಹಾರ್ದಿಕ್ ಪಾಂಡ್ಯ..!

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ಇಂದು ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿರುವ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಗಿದೆ. ಬೌಲಿಂಗ್ ಮಾಡುವ ವೇಳೆ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇಂಜುರಿಗೆ ತುತ್ತಾಗಿ ತಮ್ಮ ಓವರ್ ಅನ್ನು ಪೂರ್ಣಗೊಳಿಸಲು ಸಾಧ್ಯವಾಗದೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ‌

ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಬಾಂಗ್ಲಾ ತಂಡ ಉತ್ತಮ ಆರಂಭ ಪಡೆದುಕೊಂಡಿದೆ. ವಾಸ್ತವವಾಗಿ ಬಾಂಗ್ಲಾದೇಶ ಇನ್ನಿಂಗ್ಸ್ನ 9ನೇ ಓವರ್ ಬೌಲ್ ಮಾಡಲು ಹಾರ್ದಿಕ್ ಪಾಂಡ್ಯ ಬಂದರು. ಓವರ್ನ ಮೂರನೇ ಎಸೆತವನ್ನು ಎದುರಿಸಿದ ಲಿಟನ್ ದಾಸ್ ಸ್ಟ್ರೇಟ್ ಹಿಟ್ ಮಾಡಿದರು. ಇದೇ ವೇಳೆ ಹಾರ್ದಿಕ್ ಪಾಂಡ್ಯ ತಮ್ಮ ಬಲಗಾಲಿನಿಂದ ಚೆಂಡನ್ನು ತಡೆಯಲು ಯತ್ನಿಸಿದರು. ಆದರೆ, ಆ ಪ್ರಕ್ರಿಯೆಯಲ್ಲಿ ಜಾರಿಬಿದ್ದು, ನೋವಿನಿಂದ ನರಳಲಾರಂಭಿಸಿದರು.

ಕೂಡಲೇ ಮೈದಾನಕ್ಕೆ ಆಗಮಿಸಿದ ತಂಡದ ಪಿಸಿಯೋ, ಪಾಂಡ್ಯಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಹಳ ಹೊತ್ತು ಮೈದಾನದಲ್ಲಿಯೇ ಮಲಗಿ ನರಳುತ್ತಿದ್ದ ಪಾಂಡ್ಯ ಆ ಬಳಿಕ ಎದ್ದು ಮತ್ತೆ ಬೌಲ್ ಮಾಡಲು ಪ್ರಯತ್ನಿಸಿದರೂ ಕುಂಟುತ್ತಾ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಪಿಸಿಯೋ ಮೈದಾನದಿಂದ ಹೊರಕೆ ಕರೆದೊಯ್ದರು. ಚಿಕಿತ್ಸೆ ಪಡೆಯಲು ಮೈದಾನದಿಂದ ಹೊರನಡೆದ ಪಾಂಡ್ಯಗೆ ತಮ್ಮ ಓವರ್ ಅನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

ಹೀಗಾಗಿ ಆ ಓವರ್ ಅನ್ನು ವಿರಾಟ್ ಕೊಹ್ಲಿ ಪೂರ್ಣಗೊಳಿಸಿದರು. ಆ ಬಳಿಕ 10ನೇ ಓವರ್ ಬೌಲ್ ಮಾಡಲು ಬಂದ ಶಾರ್ದೂಲ್ ಠಾಕೂರ್ ಒಂದೇ ಓವರ್ನಲ್ಲಿ 16 ರನ್‌ ಬಿಟ್ಟುಕೊಟ್ಟು ದುಬಾರಿಯಾದರು. ಹೀಗಾಗಿ ಇದೀಗ ಪಾಂಡ್ಯ ಇಂಜುರಿಗೊಂಡಿರುವುದರ ನಡುವೆ ಶಾರ್ದೂಲ್ ದುಬಾರಿಯಾಗುತ್ತಿದ್ದು, ನಾಯಕ ರೋಹಿತ್ ಶರ್ಮಾ, ಪಾಂಡ್ಯರ ಅನುಪಸ್ಥಿತಿಯನ್ನು ಹೇಗೆ ತುಂಬುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos