ಹರಿಯಾಣ, ಮಹಾರಾಷ್ಟ್ರದಲ್ಲಿ ಇಂದು ಮತದಾನ

ಹರಿಯಾಣ, ಮಹಾರಾಷ್ಟ್ರದಲ್ಲಿ ಇಂದು ಮತದಾನ

ಮುಂಬೈ, ಚಂಡಿಗಢ, ಅ. 20 : ಮುಖ್ಯಮಂತ್ರಿ ಮನೋಹರ್ ಕಟ್ಟರ್ ಅಧಿಕಾರ ಚುಕ್ಕಾಣಿ ಹಿಡಿಯುವ ಫ್ಲ್ಯಾನ್ ಮಾಡುತ್ತಿದ್ದಾರೆ. ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ಹೈವೋಲ್ಟೇಜ್ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ.
ಎರಡೂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಜೊತೆ ಬಿಹಾರದ ಸಮ್ಟಪುರ ಮತ್ತು ಮಹಾರಾಷ್ಟ್ರದ ಸತಾರ ಲೋಕಸಭೆ ಹಾಗೂ ವಿವಿಧ ರಾಜ್ಯಗಳ 51 ವಿಧಾನಸಭೆಗಳಿಗೆ ಉಪ ಚುನಾವಣೆ ನಡೆಯಲಿದೆ. ವ್ಯಾಪಕ ಬಂದೋಬಸ್ತ್ ನಡುವೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮಹಾರಾಷ್ಟ್ರ 288 ಮತ್ತು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 17 ರಾಜ್ಯಗಳ ಎರಡು ಲೋಕಸಭಾ ಕ್ಷೇತ್ರಗಳು ಮತ್ತು 51 ವಿಧಾನಸಭಾ ಕ್ಷೇತ್ರಗಳಿಗೂ ಮತದಾನವಾಗಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಒಟ್ಟು 3,237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಲ್ಲಿ 262 ಮಹಿಳಾ ಉಮೇದುವಾರರು. ಬಹು ಜನ ಸಮಾಜ ಪಕ್ಷವು ಈ ಬಗ್ಗೆ ಗರಿಷ್ಠ 262 ಹುರಿಯಾಳುಗಳನ್ನು ಅಖಾಡಕ್ಕೀಳಿಸಿದೆ. ಅಲ್ಲದೇ 1,400 ಅಭ್ಯರ್ಥಿಗಳೂ ಸಹ ಸ್ಪರ್ಧೆಯಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ವಾರ್ಧಾಅತ್ಯಂತ ಪುಟ್ಟ ಮತ್ತು ಪನ್ವೆಲ್ ಅತಿ ದೊಡ್ಡ ವಿಧಾನಸಭಾ ಕ್ಷೇತ್ರವಾಗಿದೆ. ನಮೌಲ್ ಮತ್ತು ಬಾದಾಶಾಪುರ್ ಈ ರಾಜ್ಯದ ಅತಿ ಚಿಕ್ಕ ಮತ್ತು ಅತ್ಯಂತ ದೊಡ್ಡ ವಿಧಾನಸಭಾ ಕ್ಷೇತ್ರಗಳಾಗಿವೆ.

ಫ್ರೆಶ್ ನ್ಯೂಸ್

Latest Posts

Featured Videos