ಹರಿಯಾಣದಲ್ಲಿ ಶಾಂತಿಯುತ ಮತದಾನ

ಹರಿಯಾಣದಲ್ಲಿ ಶಾಂತಿಯುತ ಮತದಾನ

ನವದೆಹಲಿ,ಅ. 21: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಬಹುತೇಕ ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಎರಡು ರಾಜ್ಯಗಳಲ್ಲಿ ಏಕಕಾಲಕ್ಕೆ ಮತದಾನ ಆರಂಭವಾಯಿತು.
ಮಹಾರಾಷ್ಟ್ರದ 288 ಹಾಗೂ ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾರರು ಸರತಿಯಲ್ಲಿ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಘಟಾನುಘಟಿ ನಾಯಕರ ಹಣೆಬರಹ ಮತಪೆಟ್ಟಿಗೆಯಲ್ಲಿ ಭದ್ರಪಡಿಸಿದ್ದಾರೆ. ಗುರುವಾರ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos