ಹಾವು ರಕ್ಷಣೆ ಮಾಡಿದ ಉರಗ ತಜ್ಞ ಗುರುರಾಜ್!

ಹಾವು ರಕ್ಷಣೆ ಮಾಡಿದ ಉರಗ ತಜ್ಞ ಗುರುರಾಜ್!

ಉಡುಪಿ, ಮೇ. 11,ನ್ಯೂಸ್ ಎಕ್ಸ್ ಪ್ರೆಸ್: ಆಹಾರ ಅರಸುತ್ತಾ ಮನೆಯ ಟೆರೇಸ್ ಹತ್ತಿದ್ದ ಕೆರೆ ಹಾವೊಂದು ಗೇಟಿನ ಮೇಲೆ ಬಿದ್ದು ಹೊಟ್ಟೆ ಸೀಳಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ನಗರದ ಮಣಿಪಾಲದ ರಾಘವೇಂದ್ರ ನಾಯ್ಕ್ ಅವರ ಮನೆಗೆ ಇಲಿಯ ಬೆನ್ನತ್ತಿ  ಕೆರೆ ಹಾವು ಬಂದಿತ್ತು. ಇಲಿಯು  ಹಿಡಿಯಲು ಬೇನ್ನತ್ತಿ   ಗೇಟ್ ಮೇಲೆ ಬಿದ್ದ ಪರಿಣಾಮ ಹಾವಿನ ಹೊಟ್ಟೆ ಎರಡು ಕಡೆ ಸೀಳಿದೆ. ಚೂಪಾದ ರಾಡ್ ಹಾವಿನ ಹೊಟ್ಟೆಗೆ ಹೊಕ್ಕಿದೆ. ಹಾವು ಮೇಲೆ ಎದ್ದು ಬರದಂತಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೆರೆ ಹಾವು ವಿಲ ವಿಲ ಒದ್ದಾಡಿತು.  ಉರಗ ತಜ್ಞೆ ಗುರುರಾಜ್ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಹಾವವನ್ನು  ಹಿಡಿದು  ರಕ್ಷಿಸುವ ಪ್ರಯತ್ನ ಶುರು ಮಾಡಿದರು. ನೋವಿನಿಂದ  ಅರೆ ಜೀವವಾಗಿದ್ದ ಹಾವು ಗುರುರಾಜ್ ಅವರಿಗೆ ನಾಲ್ಕೈದು ಬಾರಿ ಕಚ್ಚಿದೆ. ಕೆರೆ ಹಾವಿನಲ್ಲಿ ವಿಷ ಇಲ್ಲದೆ ಇರುವುದರಿಂದ ಗುರುರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಗೆ ತಂದಿರುವ ಗುರುರಾಜ್ ಮದ್ದು ಹಚ್ಚಿ ಆರೈಕೆ ಮಾಡುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos