ಕನ್ನಡ ಸಂಸ್ಕೃತಿ ಇಲಾಖೆಗೆ ಹೈಕೋರ್ಟ್ ನೋಟಿಸ್

ಕನ್ನಡ ಸಂಸ್ಕೃತಿ ಇಲಾಖೆಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ನ. 1: ಪ್ರಸಕ್ತ ಸಾಲಿನ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್, ಆಯ್ಕೆ ಕುರಿತು ಸಮಗ್ರ ಮಾಹಿತಿ ಸಲ್ಲಿಸುವಂತೆ ಆದೇಶಿಸಿದೆ.

ಬೆಂಗಳೂರಿನ ವಿಜಯನಗರದ ವಾಸಿ ಕೇಶವ ಗೋಪಾಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ವೀರಪ್ಪ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೋಟಿಸ್ ನೀಡಿತು.

ಪ್ರಶಸ್ತಿ ಆಯ್ಕೆಗೆ ಸಮಿತಿ ರಚನೆ, ಸಮಿತಿ ಸಭೆಯ ನಡಾವಳಿ, ಆಯ್ಕೆ ಮಾನದಂಡ ಸೇರಿದಂತೆ ಇಡೀ ಆಯ್ಕೆ ಪ್ರಕ್ರಿಯೆ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಆದೇಶಿಸಿ ವಿಚಾರಣೆಯನ್ನು ಒಂದು ವಾರ ಮುಂದೂಡಿತು.

ಅರ್ಜಿದಾರರ ಪರ ವಕೀಲರಾದ ಜಿ.ಆರ್. ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿಯಮಗಳನ್ನು ಪಾಲಿಸಿಲ್ಲ. ಸಮಿತಿಯ ಸದಸ್ಯರಾಗಿದ್ದವರಿಗೆ ಸೇರಿದ ಸಂಸ್ಥೆಯನ್ನೆ ಪ್ರಶಸ್ತಿಗೆ ಆರಿಸಲಾಗಿದೆ. ಹಿಂದೆ ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿದ್ದ ಶಿಫಾರಸಿನಂತೆ ಮಾನದಂಡಗಳನ್ನು ರೂಪಿಸಿಲ್ಲ, ವಿಶೇಷ ಸಮಿತಿಯನ್ನೂ ರಚಿಸಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಮೆರ್ಸೆಸ್ ಪ್ರಭಾತ್ , ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆ, ಉದ್ಯಮಿ ಕೆ.ಪ್ರಕಾಶ್ ಶೆಟ್ಟಿ ಮತ್ತಿತರರಿಗೆ ಸರ್ಕಾರ ಪ್ರಸ್ತಕ ಸಾಲಿನ ರಾಜ್ಯೊÃತ್ಸವ ಪ್ರಶಸ್ತಿ ಘೋಷಿಸಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos