ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು: ಬೆಂಗಳೂರು ನಗರ್ತ​ಪೇಟೆಯಲ್ಲಿ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಸೇರಿ 44 ಜನರ ವಿರುದ್ಧ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಜಂತ್ರಿ ದೂರು ಆಧರಿಸಿ ಐಪಿಸಿ ಸೆಕ್ಷನ್ 143, 268ರಡಿ ಎಫ್​ಐಆರ್ ದಾಖಲಿಸಲಾಗಿದೆ.

ಇದೀಗ ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಸೇರಿದಂತೆ 44 ಮಂದಿ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಎಫ್ ಐ ಆರ್ ರದ್ದು ಕೋರಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್ ಮೊರೆ ಹೋಗಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos