ಮೈಸೂರು: ಈ ಬಾರಿ ಲೋಕಸಭಾ ಚುನಾವಣೆ ಹೆಚ್ಚು ಕುತೂಹಲಕಾರಿಯಾಗಿದೆ ಏಕೆಂದರೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಪರ್ಧಿಸುತ್ತಿದೆ ಮೈಸೂರು ಕೊಡಗು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪರ್ಧಿಸುತ್ತಿದ್ದಾರೆ.
ರಾಜವಂಶಸ್ಥರು ಹಿಂದುಳಿದವರು, ದಲಿತರು, ಬಡವರಿಗೆ ಸಾಮಾಜಿಕ ನ್ಯಾಯ ಕೊಡಿಸಿದ್ದಾರೆ. ಈ ಎಲ್ಲಾ ಸೇವಾ ಕಾರ್ಯಕ್ಕೆ ಮನ್ನಣೆ ನೀಡಿ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸುವಂತೆ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಹಾರ್ಡಿಂಜ್ ವೃತ್ತದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರಿಗೆ ಕುಡಿಯುವ ನೀರು ಸೇರಿದಂತೆ ಸಾವಿರಾರು ಯೋಜನೆಯನ್ನು ಒಡೆಯರ್ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಂದ ಮಕ್ಕಳ ಭವಿಷ್ಯ ರೂಪಿಸಲು ಸಾಧ್ಯವಾಗುವುದಿಲ್ಲ, ಗ್ಯಾರೆಂಟಿ ಜನರಿಗೆ ಉಳಿತಾಯವಾಗುವುದಕ್ಕಿಂತ ಸಾಲದವೊರೆ ಹೆಚ್ಚಿಸುತ್ತದೆ. ಗ್ಯಾರಂಟಿ ಅನುಷ್ಠಾನಕ್ಕಾಗಿ 52,000 ಕೋಟಿ ರು ಹೊಂದಿಸಲು ಕೋಟ್ಯಾಂತರ ರೂಪಾಯಿ ಸಾಲ ಮಾಡಿದ್ದಾರೆ. ಒಂದು ಕಡೆ ಗ್ಯಾರೆಂಟಿ ನೀಡಿ, ಮತ್ತೊಂದು ಕಡೆ ತೆರಿಗೆ ಹೆಚ್ಚಿಸುತ್ತಿದ್ದಾರೆ. ಸಮಾಜಕ್ಕೆ ಅವರು ನೀಡಿದ ಕೊಡುಗೆ ಪರಿಗಣಿಸಿ ಈ ಬಾರಿ ಚುನಾವಣೆಯಲ್ಲಿ ಯದುವೀರ ಅವರನ್ನು ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.