ಮಂಡ್ಯ: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳು ನಾಮ ಪತ್ರಿಕೆಯನ್ನು ಸಲ್ಲಿಸುತ್ತಿದ್ದಾರೆ. ಇಂದು ನಾಮಪತ್ರಿಕೆ ಸಲ್ಲಿಕೆಗೆ ಕೊನೆ ದಿನಾಂಕವಾಗಿರುವುದರಿಂದ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಕೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದೆಲ್ಲಡೆ ಹಲವಾರು ಕಾರಣಗಳಿಗೆ ಅನುವು ಮಾಡಿಕೊಟ್ಟಿದೆ.
ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ, ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯದಲ್ಲಿ ದೋಸ್ತಿಗಳ ಬೃಹತ್ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಇನ್ನೂ ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನಮಂಡ್ಯ ನಗರದ ವಿವಿಧ ದೇಗುಲಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಅಂಬೇಡ್ಕರ್, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಯದುವಿರ್ ಒಡೆಯರ್ ಮತ್ತಿತ್ತರೂ ಉಪಸ್ಥಿತಿ ಇದ್ದರು.