ಬೆಂ. ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ `ಹೆಚ್.ಡಿ.ದೇವೇಗೌಡ’ರಿಗೆ ಜಮೀರ್ ಮನವಿ

ಬೆಂ. ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ `ಹೆಚ್.ಡಿ.ದೇವೇಗೌಡ’ರಿಗೆ ಜಮೀರ್ ಮನವಿ

ಬೆಂಗಳೂರು, ಮಾ.20, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಮನವಿ ಮಾಡಿದ್ದಾರೆ.

ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅವರ ನಿವಾಸದಲ್ಲಿ ಭೇಟಿಯಾದ ಜಮೀರ್ ಅಹ್ಮದ್ ಖಾನ್ ಅವರು ಲೋಕಸಭೆ ಚುನಾವಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಹೆಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ.

ಇನ್ನು, ಹೆಚ್.ಡಿ.ದೇವೇಗೌಡರು ತಮ್ಮ ಕ್ಷೇತ್ರ ಆಯ್ಕೆ ಗೊಂದಲಿದ್ದು, ನಿನ್ನೆ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಸ್ಪಷ್ಟನೆ ನೀಡಿದ್ದರು. ಆದರೆ ಇದೀಗ ಜಮೀರ್ ಅಹ್ಮದ್ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos