ಡಿಸೆಂಬರ್ ತಿಂಗಳ ಒಳಗೆ ಕಾಂಗ್ರೆಸ್ ಸರ್ಕಾರ ಪತನ: ಹೆಚ್‌ಡಿಕೆ

ಡಿಸೆಂಬರ್ ತಿಂಗಳ ಒಳಗೆ ಕಾಂಗ್ರೆಸ್ ಸರ್ಕಾರ ಪತನ: ಹೆಚ್‌ಡಿಕೆ

ಮಂಡ್ಯ: ಮಂಡ್ಯ ನಗರದ ಸುರಭಿ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಗುರುವಾರ ನಡೆದ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಬಿಜೆಪಿ ಜೊತೆ ಸರ್ಕಾರ ಮಾಡಿದ ದಿನದಿಂದ ಜೆಡಿಎಸ್ ಮುಗಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ನಾನು ಕೊಟ್ಟ 20 ತಿಂಗಳ ಆಡಳಿತವನ್ನು ಜನರು ಇಂದಿಗೂ ನೆನೆಯುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ಏನೇ ಕುತಂತ್ರ ಮಾಡಿದರೂ ಜೆಡಿಎಸ್ ಮುಗಿಸಲು ಆಗಲ್ಲ ಎಂದರು.

ಮೈತ್ರಿ ಹೆಸರಿನಲ್ಲಿ ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿತು. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಜವಾದ ಮೈತ್ರಿ. ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿ ನಿರ್ಧಾರ ಮಾಡಲಾಗಿದೆ. ಎರಡೂ ಪಕ್ಷಗಳ ನಡುವಿನ ಹೊಂದಾಣಿಕೆ ಹಾಲು-ಜೇನಿನಂತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಅಧಿಕಾರ ಹಸ್ತಾಂತರಿಸಲಿಲ್ಲವೆಂಬ ಆರೋಪ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರವಿದ್ದಾಗ ಅಧಿಕಾರ ಹಸ್ತಾಂತರ ಮಾಡಲಿಲ್ಲ ಎಂಬ ಆರೋಪವನ್ನು ನನ್ನ ಮೇಲೆ ಮಾಡುತ್ತಾರೆ. ನಾನು ಮಾಡದಿರುವ ತಪ್ಪನ್ನು ನನ್ನ ತಲೆ ಮೇಲೆ ಹೊತ್ತಿದ್ದೇನೆ. ಅದರಿಂದ 17 ವರ್ಷ ವನವಾಸ ಅನುಭವಿಸಿದ್ದೇನೆ ಎಂದ ಕುಮಾರಸ್ವಾಮಿ, ಕಾಂಗ್ರೆಸ್ ಅಧಿಕಾರಕ್ಕೆ ಬರಲಿಕ್ಕೆ ಕಾರಣ ಅವರ ಶಕ್ತಿ ಅಲ್ಲ. ಜೆಡಿಎಸ್-ಬಿಜೆಪಿ ಹೊಂದಾಣಿಕೆಯಾಗದೆ ನಮ್ಮ ನಡುವೆಯೇ ಉಂಟಾದ ಪೈಪೋಟಿ ಅವರಿಗೆ ಲಾಭವಾಗಿದೆ. ಕಾಂಗ್ರೆಸ್ ಆಕಸ್ಮಿಕವಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಎಂದು ವ್ಯಂಗ್ಯವಾಡಿದರು.

ಡಿಸೆಂಬರ್ ವೇಳೆಗೆ ಸರ್ಕಾರ ಪತನ ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳ ಒಳಗೆ ಸರ್ಕಾರ ಪತನವಾಗಲಿದೆ. ಸರ್ಕಾರ ಬೀಳಿಸುವುದಕ್ಕೆ ನಾವು ವಿಜಯೇಂದ್ರ ಕಷ್ಟಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ಳುತ್ತಾರೆ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos