ಇಂದು ಪಕ್ಷ ಸಂಘಟನೆಗೆ ಹೆಚ್.ಡಿ.ಕೆ ಸಭೆ

ಇಂದು ಪಕ್ಷ ಸಂಘಟನೆಗೆ ಹೆಚ್.ಡಿ.ಕೆ ಸಭೆ

ಬೆಂಗಳೂರು, ಸೆ. 9: ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ಆರಂಭಿಸಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಸಲಿದ್ದಾರೆ.

ಇತ್ತೀಚೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮಹಾಲಕ್ಷ್ಮೀ ಲೇಔಟ್ ನಲ್ಲಿ ಕಾರ್ಯಕರ್ತರ ಸಭೆ ಕರೆದು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಈ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಉಪಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಮುಖಂಡರು, ಕಾರ್ಯಕರ್ತರ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos