ಹೊಸ ವರ್ಷಕ್ಕೆ ವಿದೇಶಕ್ಕೆ ಹೆಚ್ಡಿಕೆ ಕುಟುಂಬ

ಹೊಸ ವರ್ಷಕ್ಕೆ ವಿದೇಶಕ್ಕೆ ಹೆಚ್ಡಿಕೆ ಕುಟುಂಬ

ಬೆಂಗಳೂರು, ಡಿ. 31: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್‌ ಕುಮಾರಸ್ವಾಮಿ ಜೊತೆ ಅವರು ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ಕುಟುಂಬದವರೊಂದಿಗೆ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿದರು. ಸಿಂಗಾಪುರ ಮತ್ತು ಮಲೇಷ್ಯ ದೇಶಗಳಲ್ಲಿ ಪ್ರವಾಸ ನಡೆಸಲಿದ್ದಾರೆ. ನಾಲ್ಕು ದಿನಗಳ ಪ್ರವಾಸ ನಂತರ ಎಚ್‌ಡಿ ಕುಮಾರಸ್ವಾಮಿ ಜನವರಿ 4 ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆಂದು ವರದಿಗಳು ತಿಳಿಸಿವೆ.

 

ಫ್ರೆಶ್ ನ್ಯೂಸ್

Latest Posts

Featured Videos