ಸಿದ್ದುಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

ಸಿದ್ದುಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

ಬೆಂಗಳೂರು: ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ನೀವು (ಸಿದ್ದರಾಮಯ್ಯ) ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಕುಮಾರಸ್ವಾಮಿ ಕೇಳಿದರು. ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದರು.

ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದರು.

ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ. ಹೀಗಾಗಿ ಕಾರ್ಯಕರ್ತರಲ್ಲಿ ಯಾವ ಗೊಂದಲಗಳು ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಎರಡು ಪಕ್ಷದ ಕಾರ್ಯಕರ್ತರು ಬಹಳ ಸಮನ್ವತೆಯಿಂದ ಮೊದಲನಿಂದಲೂ ಇದ್ದಾರೆ, ಈಗಲೂ ಇರುತ್ತಾರೆ ಎಂದರು. ಜೆಡಿಎಸ್ ಕೋಮುವಾದಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ನನಗೆ ಬೇಕಾಗಿಲ್ಲ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos