ಐಟಿ ಅಧಿಕಾರಿಗಳಿಂದ ಮತ್ತೆ ಅಧಿಕಾರ ದುರುಪಯೋಗ: ಸಿಎಂ ಕುಮಾರಸ್ವಾಮಿ ಆರೋಪ

ಐಟಿ ಅಧಿಕಾರಿಗಳಿಂದ ಮತ್ತೆ ಅಧಿಕಾರ ದುರುಪಯೋಗ: ಸಿಎಂ ಕುಮಾರಸ್ವಾಮಿ ಆರೋಪ

ಬೆಂಗಳೂರು, ಮಾ.30, ನ್ಯೂಸ್ ಎಕ್ಸ್ ಪ್ರೆಸ್:  ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದು, ಇದನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಇಂದು ಬೆಳಗಿನ ಜಾವ 4 ಗಂಟೆಯವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಕಾರು ಬಾಡಿಗೆ ಪಡೆದಿದ್ದಾರೆ. ಮೈಸೂರಿನ ಸಿಎಫ್.ಟಿ.ಆರ್.ಐ.ನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos