ಎಚ್.ಡಿ.ಕೆ ಇಂದು ಡಿಕೆಶಿಗೆ ಭೇಟಿ

ಎಚ್.ಡಿ.ಕೆ ಇಂದು ಡಿಕೆಶಿಗೆ ಭೇಟಿ

ನವದೆಹಲಿ, ಅ. 21: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಡಿಕೆಶಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. ದೆಹಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್​ನಲ್ಲಿ ಜಾಮೀನಿಗಾಗಿ ಸತತ ಅರ್ಜಿ ಸಲ್ಲಿಸಲಾಗುತ್ತಿದೆ. ಆದರೂ ಡಿಕೆಶಿ ಅವರಿಗೆ ಈವರೆಗೆ ಜಾಮೀನು ಲಭ್ಯವಾಗುತ್ತಿಲ್ಲ. ಕುಮಾರಸ್ವಾಮಿ ಅವರ ಜೊತೆಗೆ ಸಂಸದ ಡಿ.ಕೆ. ಸುರೇಶ್, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಹಾಗೂ ಸಾ.ರಾ. ಮಹೇಶ್ ಸಹ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ತಿಹಾರ್ ಜೈಲಿಗೆ ಹೋಗಲಿದ್ದಾರೆ.
ಡಿಕೆಶಿ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಿದಾಗಲೇ ಅವರನ್ನು ಭೇಟಿ ಮಾಡಲು ಮಾಜಿ ಪ್ರಧಾನಿ ದೇವೇಗೌಡ ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈ ನಡುವೆ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಡಿಕೆಶಿ ಭೇಟಿಗೆ ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos