ಆರೋಗ್ಯ ಸಿಬ್ಬಂದಿ ರಜೆ ರದ್ದು!

ಬೆಂಗಳೂರು, ಆ. 9: ರಾಜ್ಯದಲ್ಲಿ ಸುಮಾರು ಒಂದು ವಾರದಿಂದ ಅರುಣ ಆರ್ಭಟಕ್ಕೆಜನರು ದಿನೆ ದಿನೆ ತತ್ತರಿಸುತ್ತಿದ್ದು, ಪ್ರವಾಹ ಉಂಟಾಗಿರುವ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಗಸ್ಟ್ 9, 10, 11, 12 ಹಾಗೂ 15ರಂದು ಇರುವ ನಿರ್ಬಂಧಿತ ಹಾಗೂ ಸಾರ್ವತ್ರಿಕ ರಜೆಗಳನ್ನು ರದ್ದುಪಡಿಸಿದ್ದು ರಜೆಯ ದಿನವೂ ಕೆಲಸ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಮಾಡಿದೆ.

ತೀವ್ರ ನೆರೆ ಹಾವಳಿಗೆ ತುತ್ತಾಗಿರುವ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಗದಗ, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೀದರ್, ಬೆಳಗಾವಿ, ಚಿಕ್ಕೋಡಿ, ರಾಯಚೂರು, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ, ಬಳ್ಳಾರಿ, ಹಾಸನ, ಉಡುಪಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ನೆರೆ ಹಾವಳಿ ತೀವ್ರವಾಗಿದೆ.

ಈ ಹಂತದಲ್ಲಿ ತುರ್ತು ಆರೋಗ್ಯ ಸೇವೆಗಳು ಸಾರ್ವಜನಿಕರಿಗೆ ಅತ್ಯವಶ್ಯಕವಾಗಿ ಬೇಕಾಗುತ್ತಿದೆ. ಹೀಗಾಗಿ ಪರಿಸ್ಥಿತಿ ಸುಧಾರಿಸುವವರೆಗೆ ಹಾಗೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳುವವರೆಗೆ ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ನಿರ್ಬಂಧಿತ ಹಾಗೂ ಸಾರ್ವತ್ರಿಕ ರಜೆಗಳನ್ನು ಒಳಗೊಂಡಂತೆ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು ಎಂದು ಸಂಬಂಧಪಟ್ಟಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಸುತ್ತೋಲೆ ಹೊರಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos