ತಲೆ ಕೂದಲು ಉದುರುವಿಕೆ ತಡೆಯುವ ಶಕ್ತಿ ಈರುಳ್ಳಿಗಿದೆ

ತಲೆ ಕೂದಲು ಉದುರುವಿಕೆ ತಡೆಯುವ ಶಕ್ತಿ ಈರುಳ್ಳಿಗಿದೆ

ಬೆಂಗಳುರು, ಏ. 4, ನ್ಯೂಸ್ ಎಕ್ಸ್ ಪ್ರೆಸ್: ತಲೆಹೊಟ್ಟು, ಕೂದಲು ಉದುರುವಿಕೆ, ಕೂದಲು ಸಿಕ್ಕಾಗುವುದು, ಕೂದಲು ಬಿರುಕು ಬಿಡುವುದು ಹೀಗೆ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರ ಈರುಳ್ಳಿ. ಈರುಳ್ಳಿಯ ಮನೆ ಮದ್ದುಗಳ ಬಗ್ಗೆ ತಿಳಿದುಕೊಂಡರೆ ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಜತೆಗೆ ಕೂದಲಿಗೆ ಕಾಂತಿ, ಉತ್ತಮ ಆರೋಗ್ಯ ಕೊಟ್ಟು ಪೋಷಿಸುವ ಗುಣವು ಈರುಳ್ಳಿಗಿದೆ. ಕೂದಲಿನ ಆರೋಗ್ಯ ವೃದ್ಧಿಗೆ ಮನೆ ಮದ್ದುಗಳೇ ಅಂತಿಮ ಪರಿಹಾರ ಎಂದಲ್ಲ. ಹೆಚ್ಚು ಸಮಸ್ಯೆಯಿದ್ದರೆ ತಜ್ಞ ವೈದ್ಯರನ್ನು ಭೇಟಿ ಮಾಡುವುದು ಉತ್ತಮ.

ಈರುಳ್ಳಿಯ ರಸ ತೆಗೆದು ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ಸ್ನಾನ ಮಾಡಿದರೆ ತಲೆ ಹೊಟ್ಟು ನಿಧಾನವಾಗಿ ನಿವಾರಣೆಯಾಗುತ್ತದೆ. ವಾರದಲ್ಲಿ 2 ಬಾರಿ ಹೀಗೆ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

ತಲೆಗೆ ಶ್ಯಾಂಪೂ ಬಳಸಿ ಸ್ನಾನ ಮಾಡಿದ ಬಳಿಕ ಕೊನೆಯಲ್ಲಿ ಬಿಸಿನೀರಿಗೆ ಈರುಳ್ಳಿ ರಸ ಹಾಕಿ ತೊಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಈ ರೀತಿ ಮಾಡುತ್ತಾ ಬಂದರೆ ಕೂದಲ ಎಲ್ಲ ಸಮಸ್ಯೆಗಳು ಬಹುಬೇಗ ಕಡಿಮೆಯಾಗುತ್ತದೆ.

ಕೊಬ್ಬರಿ ಎಣ್ಣೆಯ ಜತೆಗೆ ಒಂದು ಚಮಚ ಈರುಳ್ಳಿ ರಸ, ಒಂದು ಚಮಚ ಬಾದಾಮಿ ಎಣ್ಣೆ ಮಿಶ್ರಣ ಮಾಡಿಕೊಂಡು ತಲೆಗೆ ಮಸಾಜ್ ಮಾಡುವುದರಿಂದ ಕೂದಲಿಗೆ ಕಾಂತಿ ಬರುವುದರ ಜತೆಗೆ ಹೊಟ್ಟು ಕೂಡ ನಿವಾರಣೆಯಾಗುತ್ತದೆ.

ಈರುಳ್ಳಿಗೆ ಜೇನುತುಪ್ಪ ಸೇರಿಸಿಕೊಂಡು ದಿನನಿತ್ಯ ಸೇವಿಸುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.

ಈರುಳ್ಳಿಯನ್ನು ಸಣ್ಣದಾಗಿ ಹಚ್ಚಿ ಅದಕ್ಕೆ 1 ಚಮಚ ಆಲಿವ್ ಎಣ್ಣೆ ಸೇರಿಸಿ ತಲೆಗೆ ಹಚ್ಚಿ 2 ಗಂಟೆಯ ನಂತರ ಸ್ನಾನ ಮಾಡಿದರೆ ಕೂದಲು ಆರೋಗ್ಯವಾಗಿರುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos