ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಿ

ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಿ

ಬೆಂಗಳೂರು, . 27, ನ್ಯೂಸ್ ಎಕ್ಸ್ ಪ್ರೆಸ್: ಬೇಸಿಗೆಯಲ್ಲಿ ಸೌತೆಕಾಯಿ ಸಲಾಡ್ ಸೇವನೆ ಮಾಡಬೇಕು. ಸೌತೆಕಾಯಿಯಲ್ಲಿ ವಿಟಮಿನ್ ಎ, ಬಿ 1, ಬಿ 6, ಸಿ, ಪೊಟ್ಯಾಸಿಯಮ್, ಫಾಸ್ಫರಸ್, ಕಬ್ಬಿಣ ಅಂಶಗಳು ಇದರಲ್ಲಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಸೌತೆಕಾಯಿ ನೆರವಾಗುತ್ತದೆ. ಪ್ರತಿದಿನ ಇದರ ಸೇವನೆಯಿಂದ ಅನೇಕ ಉಪಯೋಗಗಳಿವೆ.

ಬೇಸಿಗೆಯಲ್ಲಿ ನಮ್ಮ ದೇಹದ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಪ್ರತಿದಿನ ಸೌತೆಕಾಯಿ ಸೇವನೆ ಮಾಡಿದರೆ ದೇಹಕ್ಕೆ ಬೇಕಾದ ನೀರಿನಾಂಶವನ್ನು ಇದು ಒದಗಿಸುತ್ತದೆ. ಇದರಲ್ಲಿ ನೀರಿನಂಶ ಜಾಸ್ತಿ ಇರುವುದರಿಂದ ದೇಹದಲ್ಲಿರುವ ಕೊಳಕನ್ನು ಕೂಡ ಇದು ಹೋಗಲಾಡಿಸುತ್ತದೆ.

ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಅನೇಕರನ್ನು ಕಾಡುತ್ತದೆ. ಊರಿಯೂತ, ಶರೀರದಲ್ಲಿ ಉರಿ ಕಂಡು ಬಂದರೆ ಸೌತೆಕಾಯಿ ಸೇವನೆ ಒಳ್ಳೆಯದು.

ಸೌತೆಕಾಯಿಯಲ್ಲಿ ವಿಟಮಿನ್ ಬಿ, ಸಕ್ಕರೆ ಹಾಗೂ ಎಲೆಕ್ಟ್ರೋಲೈಟ್ ಅಂಶವಿರುತ್ತದೆ. ಇದು ತಲೆನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ತಲೆ ನೋವು ಅಥವಾ ಆಲಸ್ಯ ಕಾಣಿಸಿಕೊಳ್ಳುತ್ತಿದ್ದರೆ ರಾತ್ರಿ ಮಲಗುವ ಮುನ್ನ ಸೌತೆಕಾಯಿ ತಿಂದು ಮಲಗಿರಿ.

ಪ್ರತಿದಿನ ಸೌತೆಕಾಯಿ ಸೇವನೆ ಮಾಡುವುದರಿಂದ ದೇಹದಲ್ಲಿರುವ ಯೂರಿಕ್ ಆಮ್ಲದ ಮಟ್ಟ ನಿಯಂತ್ರಣದಲ್ಲಿರುತ್ತದೆ.

ಕೀಲು ನೋವಿನಿಂದ ಬಳಲುತ್ತಿದ್ದವರು ಸೌತೆಕಾಯಿಯನ್ನು ಹೆಚ್ಚಾಗಿ ಉಪಯೋಗಿಸಬೇಕು. ಸೌತೆಕಾಯಿ ಜೊತೆ ಕ್ಯಾರೆಟ್ ಜ್ಯೂಸ್ ಮಿಕ್ಸ್ ಮಾಡಿ ಕುಡಿಯುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ.

ಬೇಸಿಗೆಯಲ್ಲಿ ದೇಹದ ತಾಪಮಾನದಲ್ಲಿ ಏರುಪೇರಾಗುತ್ತದೆ. ಇದರಿಂದ ಪದೇ ಪದೇ ಜ್ವರ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಸೌತೆಕಾಯಿಯನ್ನು ಪ್ರತಿದಿನ ಸೇವಿಸುತ್ತ ಬನ್ನಿ. ಇದರಿಂದ ದೇಹದ ತಾಪಮಾನ ನಿಯಂತ್ರಣಕ್ಕೆ ಬರುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos