ರಾಷ್ಟ್ರ ರಾಜಧಾನಿಯಲ್ಲಿ ವಿಪರೀತ ಮಾಲಿನ್ಯ.!

ರಾಷ್ಟ್ರ ರಾಜಧಾನಿಯಲ್ಲಿ ವಿಪರೀತ ಮಾಲಿನ್ಯ.!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಾಹನಗಳು ಹೆಚ್ಚಾಗಿದೆ. ಇದರಿಂದ ವಾಯುಮಾಲಿನ್ಯ ಹೆಚ್ಚಾಗಿದೆ. ಇದರಿಂದ ವಾತವರಣದಲ್ಲಿ ಏರುಪೇರಾಗಿದೆ.

ರಾಷ್ಟ್ರ ರಾಜಧಾನಿ ವಲಯದಲ್ಲಿ ವಾಯುಮಾಲಿನ್ಯದ ಪ್ರಮಾಣ ಮಿತಿಮೀರಿದ್ದು, ಈ ಹಿಂದೆಂದೂ ಕಂಡು ಕೇಳರಿಯದಷ್ಟು ‘ಹೊಗೆಮಾಲಿನ್ಯ’ ಸೃಷ್ಟಿಯಾಗಿದೆ. ದೆಹಲಿಯಲ್ಲಿ ಆನಂದ ವಿಹಾರ್‌ ಪ್ರದೇಶದಲ್ಲಿ ವಾಯುಗುಣಮಟ್ಟ ಸೂಚ್ಯಂಕ ನಂಬಲಸಾಧ್ಯವಾದ 999 ಅಂಕಗಳಿಗೆ ಕುಸಿತವಾಗಿದೆ ಎಂದು ಖಾಸಗಿ ಹವಾಮಾನ ಸಂಸ್ಥೆಯೊಂದು ಹೇಳಿದೆ. ಅಲ್ಲದೆ, ಇಡೀ ನಗರದ ಸರಾಸರಿ ಸೂಚ್ಯಂಕವು ‘ಅತಿ ಕಳಪೆ’ ಮಟ್ಟಕ್ಕೆ ಕುಸಿದಿದ್ದು, ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ.

ಈ ಹಿನ್ನೆಲೆಯಲ್ಲಿ, ‘ವಾಯುವಿನಲ್ಲಿ ಶ್ವಾಸಕೋಸಕ್ಕೆ ಹಾನಿಕರವಾದ ಸೂಕ್ಷ್ಮ ಕಣಗಳ ಪ್ರಮಾಣ ಅಧಿಕವಾಗಿದ್ದು, ಇದರಿಂದ ಉಸಿರಾಟದ ಸಮಸ್ಯೆ, ನೆಗಡಿ, ಕೆಮ್ಮು, ಶ್ವಾಸಕೋಶದ ಸೋಂಕು ಉಂಟಾಗಬಹುದು. ಹೀಗಾಗಿ ಮನೆಯಲ್ಲಿ ವಾಯು ಶುದ್ಧೀಕರಣ ಯಂತ್ರಗಳನ್ನು ಬಳಕೆ ಮಾಡಬೇಕು’ ಎಂದು ಎಂದು ವೈದ್ಯರು ಸೂಚನೆ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos