ರಾಜ್ಯದಲ್ಲಿ ಚುರುಕುಗೊಂಡ ಮಳೆ!

ರಾಜ್ಯದಲ್ಲಿ ಚುರುಕುಗೊಂಡ ಮಳೆ!

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಮುಂಗಾರು ಮಳೆ ಚುರುಕಾಗಿದೆ ಈ ನಡುವೆ ಹವಾಮಾನ ಇಲಾಖೆ ಮುಂದಿನ ಹಲವು ದಿನಗಳಲ್ಲಿ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಲಕ್ಷಣಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಿಚಾಂಗ್ ಚಂಡಮಾರುತ ಪ್ರಭಾವ ಸ್ವಲ್ಪ ಪ್ರಮಾಣದಲ್ಲಿ ಕರ್ನಾಟಕದ ಮೇಲೂ ಬೀರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ ಮೂರು ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos