ತಮಿಳುನಾಡು: ಭಾರಿ ಮಳೆಯಿಂದ ಶಾಲೆಗಳಿಗೆ ರಜೆ!

ತಮಿಳುನಾಡು: ಭಾರಿ ಮಳೆಯಿಂದ ಶಾಲೆಗಳಿಗೆ ರಜೆ!

ಬೆಂಗಳೂರು: ಈಶಾನ್ಯ ಮುಂಗಾರು ಇನ್ನಷ್ಟು ಚುರುಕುಗೊಳ್ಳುವ ಸಾಧ್ಯತೆಯಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 5ರವರೆಗೆ ಭಾರೀ ಮಳೆಯಾಗಲಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು  ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ನಾಗಪಟ್ಟಿಣಂ, ಕಿಲ್ವೇಲೂರು ತಾಲೂಕು, ವಿಲುಪ್ಪುರಂ, ಕಡಲೂರು, ರಾಣಿಪೇಟ್, ವೆಲ್ಲೂರು ಮತ್ತು ತಿರುವಣ್ಣಾಮಲೈ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇಡೀ ತಮಿಳುನಾಡಿನಾದ್ಯಂತ ಕಳೆದ 24 ಗಂಟೆಗಳಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಇಷ್ಟು ಮಾತ್ರವಲ್ಲದೆ, ಕುಲಸಚಿವರು ಹೊರಡಿಸಿರುವ ಒಂದು ಅಧಿಸೂಚನೆಯ ಪ್ರಕಾರ, ಭಾರೀ ಮಳೆಯಿಂದಾಗಿ ವಿಶ್ವವಿದ್ಯಾನಿಲಯ ಮತ್ತು ಅದರ ಸಂಯೋಜಿತ ಕಾಲೇಜುಗಳಲ್ಲಿ ಜನವರಿ 8 ರಂದು ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos