4 ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ

4 ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ

ಬೆಂಗಳೂರು: ಕರ್ನಾಟಕದಲ್ಲಿ ಇನ್ನುಮುಂದೆ 4 ವರ್ಷ ಮೇಲ್ಪಟ್ಟವರಿಗೆ ಹೆಲ್ಮೆಟ್ ಕಡ್ಡಾಯವಾಗಲಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಚಾಲನಾ ಪರಿವಾನಗಿ ರದ್ದು ಮಾಡಲಾಗುವುದು, ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ನಿಯಮದ ಪ್ರಕಾರ ನಾಲ್ಕು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ದ್ವಿಚಕ್ರವಾಹನಗಳಲ್ಲಿ ಸಂಚರಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಹೆಲ್ಮೆಟ್ ಧರಿಸಬೇಕಿದೆ.

ಹೆಲ್ಮೆಟ್ ಹಾಕದ ಚಾಲಕನಿಗೆ ದಂಡ ವಿಧಿಸುವುದರ ಜತೆಗೆ ಚಾಲನಾ ಪರವಾನಗಿಯನ್ನು ಮೂರು ತಿಂಗಳುಗಳ ಕಾಲ ಅಮಾನತುಗೊಳಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯದ ಅಧಿಕಾರಿಗಳ ಜೊತೆಯಲ್ಲಿ ಅಕ್ಟೋಬರ್ 14 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದ ಈ ಸಮಿತಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos