ರಾಜ್ಯದಲ್ಲಿ ಪೊಲೀಸ್​ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ

ರಾಜ್ಯದಲ್ಲಿ ಪೊಲೀಸ್​ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ

ಬೆಂಗಳೂರು: ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿವೆ. ಅದರಲ್ಲಿಯೂ ಹೆಲ್ಮೆಟ್ ಇಲ್ಲದೇ ಅಧಿಕಾರಿ ಮತ್ತು ಸಿಬ್ಬಂದಿ ರಸ್ತೆ ಅಪಘಾತ‌‌ದಲ್ಲಿ ಕೆಲವರಿಗೆ ಗಾಯಗಳಾದರೆ ಇನ್ನೂ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ ಮತ್ತೆ ಈ ರೀತಿಯ ಅಪಘಾತಗಳು ಮರು ಕಳುಹಿಸದಂತೆ ಕ್ರಮಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ಪೊಲೀಸ್​ ಸಿಬ್ಬಂದಿಗೆ ಕಡ್ಡಾಯ ಹೆಲ್ಮೆಟ್ ಆದೇಶ ಹೊರಡಿಸಲಾಗಿದೆ.

ಬೈಕ್​ ಚಾಲನೆ ವೇಳೆ ಪೊಲೀಸ್​ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್​ ಧರಿಸುವಂತೆ ಬುಧವಾರ ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮಟ್ ಧರಿಸದೇ, ರಸ್ತೆ ಅವಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕೆಲವರು ಮೃತಪಟ್ಟಿರುವ ಘಟನೆಗಳು ಸಂಭವಿಸಿರುವುದು ಕಂಡು ಬಂದಿದೆ.

ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮಟ್​ನ ನಿರ್ದಿಷ್ಟತೆಯೆ ಬಗ್ಗೆ ವಿವರಿಸಿದ್ದು ಆ ಪ್ರಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲೈಟ್​ನ್ನು ಧರಿಸುವಂತೆ ನಿರ್ದೇಶನಗಳನ್ನು ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos