ಬೆಂಗಳೂರು, ಫೆ. 07: ಕೆಲವು ದಿನಗಳಿಂದ 40 ದಿನದ ಮಗು ಒಂದು ಹೃದ್ರೋಗದಿಂದ ಬಳಲುತ್ತಿದ್ದು, ಮಗವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಗ್ರೀನ್ ಝೀರೋ ಟ್ರಾಫಿಕ್ ಮೂಲಕ ನೆನ್ನೆ ಕರೆತರಲಾಗಿದೆ.
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ.
ಇದೇ ವೇಳೆ ಸಾರ್ವಜನಿಕರು ಚಾಲಕ ಹನೀಫ್ ಅವರಿಗೆ ಮೈಸೂರು ಪೇಟಾ ಹಾಕಿ ಸನ್ಮಾನಿಸಿದರು. ಹನೀಫ್ ಅವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.