ಹೈಡ್ ಅಂಡ್ ಸೀಕ್ ಟ್ರೇಲರ್‌ ರಿಲೀಸ್‌ ಮಾಡಿದ ರಾಮಲಿಂಗಾರೆಡ್ಡಿ

ಹೈಡ್ ಅಂಡ್ ಸೀಕ್ ಟ್ರೇಲರ್‌ ರಿಲೀಸ್‌ ಮಾಡಿದ ರಾಮಲಿಂಗಾರೆಡ್ಡಿ

ಬೆಂಗಳೂರು: ಯುವನಟ ಅನೂಪ್ ರೇವಣ್ಣ ಅಭಿನಯದ ನಾಲ್ಕನೇ ಚಿತ್ರ ಹೈಡ್ ಅಂಡ್ ಸೀಕ್ ಮಾರ್ಚ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅನೂಪ್‌ ರೇವಣ್ಣ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಅಣ್ಣಾವ್ರ ಮೊಮ್ಮಗಳು ಧನ್ಯಾ ರಾಮ್‌ ಕುಮಾರ್‌ ನಾಯಕಿಯಾಗಿ ನಟಿಸಿದ್ದಾರೆ. ಇದೀಗ ಇದೇ ಚಿತ್ರದ ಟ್ರೇಲರ್‌ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಈ ಚಿತ್ರದಲ್ಲಿ ಅನೂಪ್ ರೇವಣ್ಣ ಕಿಡ್ನಾಪರ್ ಆಗಿ ಕಾಣಿಸಿಕೊಂಡಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿ.ಪ.ಸದಸ್ಯ ಎಸ್.ವಿಶ್ವನಾಥ್ ಅವರುಗಳು ಟ್ರೈಲರ್ ರಿಲೀಸ್ ಮಾಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ರೇವಣ್ಣ ಅವರ ಅನೇಕ ಸ್ನೇಹಿತರು ಹಾಜರಿದ್ದು, ಶುಭ ಹಾರೈಸಿದರು. ಈ ಚಿತ್ರದಲ್ಲಿ  ಅನೂಪ್ ರೇವಣ್ಣ ಅವರು  ಒಬ್ಬ ಕಿಡ್ನಾಪರ್ ಆಗಿ ಕಾಣಿಸಿಕೊಂಡಿದ್ದಾರೆ. ಧನ್ಯಾ ರಾಮ್‌ಕುಮಾರ್ ಚಿತ್ರದ ನಾಯಕಿ.

ವೇದಿಕೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡುತ್ತ ರೇವಣ್ಣ ಅವರ ಮಗ ಹೀರೋ ಆಗಿ ನಟಿಸಿರುವ ಈ ಚಿತ್ರ ಯಶಸ್ವಿಯಾಗಲಿ, ಇದು ಅವರ ನಾಲ್ಕನೇ ಚಿತ್ರ. ಟ್ರೈಲರ್ ನಲ್ಲಿ  ಆತನ ಅಭಿನಯ ಚೆನ್ನಾಗಿ ಬಂದಿದೆ,  ಚಿತ್ರವೂ ಸಹ ಚೆನ್ನಾಗಿರುತ್ತದೆ,  ಈ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯ ಹೆಸರು ಬರಬೇಕು ಎಂದು ಶುಭ ಹಾರೈಸಿದರು.

ನಂತರ ಮಾಜಿ ಸಚಿವ ರೇವಣ್ಣ ಮಾತನಾಡಿ, ಚಿತ್ರರಂಗ ಇವತ್ತು ಚಾಲೆಂಜಿಂಗ್ ಏರಿಯಾ ಆಗಿದೆ. ಕನ್ನಡ ಚಿತ್ರರಂಗಕ್ಕೆ ಹಿಂದೆ ಸೀಮಿತ ಮಾರುಕಟ್ಟೆ ಇತ್ತು. ಈಗ ಅದು ವಿಸ್ತಾರವಾಗಿದೆ. ನಾನು ಈ ಚಿತ್ರದ ಶೂಟಿಂಗ್ ಟೈಮ್‌ನಲ್ಲಿ ಹೋಗಿದ್ದೇನೆ. ಎಲ್ಲರೂ ಕುಟುಂಬದ ರೀತಿ ಸಿನಿಮಾ ಮಾಡಿದ್ದಾರೆ ಎಂದು ಹೇಳಿದರು. ಟ್ರೇಲರ್ ತುಂಬಾ ಇಂಪ್ರೆಸಿವ್ ಆಗಿದೆ. ಅನೂಪ್ ಒಳ್ಳೇ ಹುಡುಗ, ಆತನಿಗೆ ಉತ್ತಮ ಭವಿಷ್ಯವಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos