ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​ !

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​ !

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ಫುಡ್​​ಪ್ರಿಯರ ಅಚ್ಚುಮೆಚ್ಚಿನ ತಾಣ ರಾಮೇಶ್ವರಂ ಕೆಫೆಯಲ್ಲಿ IED ಬಾಂಬ್ ಸ್ಫೋಟಿಸಿದ್ದಾರೆ. ಸ್ಥಳದಲ್ಲಿ ಬ್ಯಾಟರಿ, ನಟ್​ಗಳು ಪತ್ತೆಯಾಗಿದೆ. ಈ ಘಟನೆ ರಾಜ್ಯ ರಾಜಧಾನಿ ಬೆಂಗಳೂರನ್ನು ಅಕ್ಷರಶಃ ಬೆಚ್ಚಿಬಿದಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಬಾಂಬ್ ಸ್ಫೋಟವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ​​ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ. ವಿಐಪಿ ಲೈನ್​​ನಲ್ಲಿ ಪಾರ್ಕಿಂಗ್​ ಅವಧಿಯನ್ನು ಅರ್ಧ ಗಂಟೆಯಿಂದ 5 ರಿಂದ 10 ನಿಮಿಷಕ್ಕೆ ಇಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚಳ ಮಾಡಿದ್ದಾರೆ. ರಾತ್ರಿ-ಹಗಲು ಮೂರು ಪಾಳಯದಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos